Bengaluru

ದೇಗುಲಗಳಲ್ಲಿ ಧ್ವನಿವರ್ಧಕ ಬಳಕೆಗೆ ಕರೆ ಕೊಟ್ಟವರು ಭಯೋತ್ಪಾದಕರು; ಬಿ.ಕೆ.ಹರಿಪ್ರಸಾದ್‌

ಬೆಂಗಳೂರು: ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಸಲು ಕರೆ ಕೊಟ್ಟವರು ಭಯೋತ್ಪಾದಕರು ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್‌ ಕಿಡಿಕಾರಿದ್ದಾರೆ.  ವಿಧಾನ ಸೌಧದಲ್ಲಿ ಮಾತನಾಡಿದ ಅವರು, ಯಾರು ಈ ಸುಪ್ರಭಾತ ಅಭಿಯಾನವನ್ನು ಪ್ರಾರಂಭ ಮಾಡುತ್ತಿದ್ದಾರೋ ಅವರು ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಭಯೋತ್ಪಾದಕರು ಎಂದು ಆಪಾದಿಸಿದರು.

 

ಸರ್ಕಾರ ಸಮಾಜದ ಶಾಂತಿಯನ್ನು ಹಾಳು ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ (ಯುಎಪಿಎ) ಕಾಯ್ದೆಯ ಅಡಿಯಲ್ಲಿ ಅರೆಸ್ಟ್ ಮಾಡಬೇಕು ಎಂದು ಬಿ.ಕೆ.ಹರಿಪ್ರಸಾದ್‌ ಆಗ್ರಹಿಸಿದರು.

Share Post