ತಾಂತ್ರಿಕ ದೋಷ ಹಿನ್ನೆಲೆ; ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ
ಬೆಂಗಳೂರು; ಮೈಸೂರು ರಸ್ತೆ ಮತ್ತು ಕೆಂಗೇರಿ ನಡುವಿನ ಮೆಟ್ರೊ ರೈಲು ಮಾರ್ಗದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇದರಿಂದಾಗಿ ಈ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರದಲ್ಲಿ ತಡವಾಗುತ್ತಿದೆ. ಅರ್ಧಗಂಟೆಗೊಂದು ರೈಲು ಸಂಚಾರ ಮಾಡುತ್ತಿದೆ. ಆದ್ರೆ ಮೈಸೂರು ರಸ್ತೆ-ಮೆಜೆಸ್ಟಿಕ್ ಮಾರ್ಗದಲ್ಲಿ ಯಾವುದೇ ತೊಂದರೆಯಾಗಿಲ್ಲ.
ಮೈಸೂರು ರಸ್ತೆ-ಕೆಂಗೇರಿ ಮಾರ್ಗದಲ್ಲಿ ಒಂದೇ ಟ್ರ್ಯಾಕ್ ನಲ್ಲಿ 25 ರಿಂದ 30 ನಿಮಿಷಕ್ಕೊಂದು ರೈಲು ಸಂಚರಿಸುತ್ತಿದೆ. ತಾಂತ್ರಿಕ ದೋಷ ಸರಿಪಡಿಸಲು ನಿರ್ವಹಣಾ ತಂಡ ಶ್ರಮಿಸುತ್ತಿದೆ. ಶೀಘ್ರದಲ್ಲೇ ಸಮಸ್ಯೆ ಸರಿಯಾಗಲಿದ್ದು, ರೈಲುಗಳ ಸಂಚಾರ ಸಹಜವಾಗಲಿದೆ ಎಂದು ಬಿಎಂಆರ್ ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ. ರೈಲು ಸಂಚಾರದಲ್ಲಿ ವ್ಯತ್ಯಯ ಆಗಿರುವುದರಿಂದ ಮೈಸೂರು ರಸ್ತೆಯಿಂದ ಕೆಂಗೇರಿ ತನಕದ ನಿಲ್ದಾಣಗಳಲ್ಲಿ ಪ್ರಯಾಣಿಕರು ರೈಲಿಗಾಗಿ ಕಾಯುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಕಚೇರಿಗಳಿಗೆ ತೆರಳಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ.