Bengaluru

ಮೆಟ್ರೋ ನಿಲ್ದಾಣದ ಒಳಗೆ ಮಾಲ್‌, ಶಾಪಿಂಗ್‌ ಕಾಂಪ್ಲೆಕ್ಸ್‌; ಬಿಎಂಆರ್‌ಸಿಎಲ್‌ ಚಿಂತನೆ

ಬೆಂಗಳೂರು; ನಮ್ಮ ಮೆಟ್ರೋ ನಿಲ್ದಾಣಗಳಿಗೆ ಹೈಟೆಕ್‌ ಟಚ್‌ ನೀಡಲು ಬಿಎಂಆರ್‌ಸಿಎಲ್‌ ಚಿಂತನೆ ನಡೆಸುತ್ತಿದೆ. ಮೆಟ್ರೋ ನಿಲ್ದಾಣದ ಒಳಗೆ ಶಾಪಿಂಗ್‌ ಕಾಂಪ್ಲೆಕ್ಸ್‌ ನಿರ್ಮಾಣ ಮಾಡಿ ಆದಾಯ ಹೆಚ್ಚಿಸಿಕೊಳ್ಳಲು ಬಿಎಂಆರ್‌ಸಿಎಲ್‌ ಪ್ಲ್ಯಾನ್‌ ಮಾಡಿದೆ. ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಲ್ಲಿ ನಾಲ್ಕು ಮಹಡಿಗಳನ್ನು ನಿರ್ಮಾಣ ಮಾಡಿ ಅಲ್ಲಿ ಮಾಲ್‌, ಶಾಪಿಂಗ್‌ ಕಾಂಪ್ಲೆಕ್ಸ್‌ ಮಾಡಲು ಯೋಜನೆ ರೂಪಿಸಲಾಗಿದೆ.

ಮೆಜೆಸ್ಟಿಕ್‌ನಲ್ಲಿ ಹೆಚ್ಚು ವಾಣಿಜ್ಯ ಚಟುವಟಿಕೆಗಳು ನಡೆಯುತ್ತವೆ. ಇಲ್ಲಿ ದಿನವೂ ಲಕ್ಷ ಲಕ್ಷ ಜನ ಓಡಾಡುತ್ತಾರೆ. ಇಲ್ಲಿ ವಾಣಿಜ್ಯ ಚಟುವಟಿಕೆ ಆರಂಭಿಸಿದರೆ ಜನರಿಗೆ ಅನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ಬಿಎಂಆರ್‌ಸಿಎಲ್‌ ಮೆಟ್ರೋ ನಿಲ್ದಾಣದಲ್ಲಿ ನಾಲ್ಕು ಮಹಡಿ ನಿರ್ಮಾಣ ಮಾಡಿ, ಶಾಪಿಂಗ್‌ ಕಾಂಪ್ಲೆಕ್ಸ್‌ ನಿರ್ಮಾಣ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಇದರಲ್ಲಿ ಮಾಲ್‌, ಥಿಯೇಟರ್‌, ಕಚೇರಿಗಳಿಗೆ ಬಾಡಿಗೆ ನೀಡಲು ನಿರ್ಧಾರ ಮಾಡಲಾಗಿದೆ.

 

Share Post