ಬೆಂಗಳೂರಿನಲ್ಲಿ ಸ್ಮಾರ್ಟ್ ಟ್ರಾಫಿಕ್ ವ್ಯವಸ್ಥೆ ಜಾರಿಗೊಳಿಸಲು ಹೈಕೋರ್ಟ್ ಸೂಚನೆ
ಬೆಂಗಳೂರು: ನಗರದಲ್ಲಿ ಟ್ರಾಫಿಕ್ ಪೊಲೀಸರ ವಿರುದ್ಧ ಭ್ರಷ್ಟಾಚಾರ ದೂರುಗಳು ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಸ್ಮಾರ್ಟ್ ಟ್ರಾಫಿಕ್ ವ್ಯವಸ್ಥೆ ರೂಪಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಟ್ರಾಫಿಕ್ ಪೊಲೀಸರು ಬಾಡಿ ಕ್ಯಾಮರಾ ಧರಿಸುವಂತೆ ಸೂಚನೆ ನೀಡಿದೆ. ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಇಂಥದ್ದೊಂದು ಸಲಹೆ ನೀಡಿದೆ. ಕರ್ತವ್ಯದ ವೇಳೆ ಬಾಡಿ ಕ್ಯಾಮರಾ ಧರಿಸಿದ್ರೆ ಇಂತಹ ಅನಾಹುತಗಳು ನಡೆಯುವುದಿಲ್ಲ ಈ ಬಗ್ಗೆ ರಾಜ್ಯ ಸರ್ಕಾರ ಪೊಲೀಸ್ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿ ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಒಟ್ಟು 2,680ಬಾಡಿ ಕ್ಯಾಮರಾಗಳನ್ನು ಖರೀದಿ ಮಾಡಲಾಗುವುದು, ಈವರೆಗೆ 1,097 ಬಾಡಿ ಕ್ಯಾಮರಾ ಖರೀದಿಸಿರುವುದಾಗಿ ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಈಗ ಖರೀದಿಸಿರುವ ಕ್ಯಾಮರಾ ಬಲಸಲು ಹೈಕೋರ್ಟ್ ಸೂಚನೆ ಕೊಟ್ಟಿದೆ. ಟ್ರಾಫಿಕ್ ಪೊಲೀಸರ ಭ್ರಷ್ಟಾಚಾರದ ಬಗ್ಗೆ ಗೀತಾ ಮಿಶ್ರಾ ಎಂಬುವವರು ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ರು.