Bengaluru

ಬಾಂಬ್‌ ಬೆದರಿಕೆ ಪ್ರಕರಣ; ರಾಜ್ಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ – ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯಕ್ಕೆ ಕೆಟ್ಟ ಹೆಸರು ತರಲು ಬಾಂಬ್‌ ಬೆದರಿಕೆ ಹಾಕಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಾಂಬ್ ಬೆದರಿಕೆ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ರಾಜ್ಯದೆಲ್ಲೆಡೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಲ್ಲಿಂದ ಕರೆ ಬಂದಿದೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಬೊಮ್ಮಾಯಿ ಇದೇ ವೇಳೆ ತಿಳಿಸಿದ್ದಾರೆ.

ಈ ಪ್ರಕರಣವನ್ನು ಪೊಲೀಸ್‌ ಅಧಿಕಾರಿಗಳು ಗಂಭೀರವಾಗಿ ತೆಗೆದುಕೊಂಡು ತಪಾಸಣೆ ನಡೆಸುತ್ತಿದ್ದಾರೆ. ಶಾಂತಿ ಕದಡುವ ಹುನ್ನಾರ ನಡೆದಿದೆ. ಬೆದರಿಕೆ ಕರೆ ಮಾಡಿದವರನ್ನು ಬಂಧಿಸುತ್ತೇವೆ. ದೂರವಾಣಿ ಕರೆಗಳ ವಿವರ ಪರಿಶೀಲಿಸಲು ಹೇಳಲಾಗಿದೆ. ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲೂ ಸೂಚಿಸಲಾಗಿದೆ ಎಂದರು. ಈ ಘಟನೆಗೆ ಸಂಬಂಧಿಸಿದಂತೆ ಬೊಮ್ಮಾಯಿ ಅವರಿಗೆ ಗುಪ್ತಚರ ಇಲಾಖೆ ಎಡಿಜಿಪಿ ದಯಾನಂದ್‌ ಸಮಗ್ರ ಮಾಹಿತಿ ನೀಡಿದ್ದಾರೆ.

Share Post