ಶಾಲೆಗಳಿಗೆ ಬಾಂಬ್ ಬೆದರಿಕೆ; ಖುದ್ದು ಪರಿಶೀಲಿಸಿದ ಡಿಕೆಶಿ
ಬೆಂಗಳೂರು; ಬೆಂಗಳೂರಿನ ಹದಿನೈದಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಇ ಮೇಲ್ ಬಂದಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸದ ಬಳಿಯ ಶಾಲೆಗು ಬೆದರಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನೀವ್ ಬೇಬಿ ಸಿಟ್ಟಿಂಗ್‌ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಹೀಗಾಗಿ ಸ್ಥಳಕ್ಕೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಇನ್ನೂ ಈ ವಿಷಯಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಅವರೂ ಸಹ ನಗರ ಪೊಲೀಸ್ ಆಯುಕ್ತರಿಂದ ಮಾಹಿತಿ ಪಡೆದುಕೊಂಡಿದ್ದಾರೆ.