UKRAINE_RUSSIA WAR; ಉಕ್ರೇನ್‌ನಲ್ಲಿರುವ ಕನ್ನಡಿಗರು ಸುರಕ್ಷಿತವಾಗಿ ಬರ್ತಾರೆ; ಸಿಎಂ ಬೊಮ್ಮಾಯಿ ವಿಶ್ವಾಸ
ಬೆಂಗಳೂರು: ಉಕ್ರೇನ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳು ಸಾವಿರಾರು ಮಂದಿ ಸಿಲುಕಿದ್ದಾರೆ. ಕನ್ನಡಿಗರೂ ನೂರಾರು ಮಂದಿ ಇದ್ದಾರೆ. ಅವರೆಲ್ಲರೂ ಸುರಕ್ಷಿತವಾಗಿ ಭಾರತಕ್ಕೆ ಕರೆತರುವ ವಿಶ್ವಾಸ ನನಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಉಕ್ರೇನ್‌ನಲ್ಲಿರುವ ನಮ್ಮ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಅವಕಾಶ ಮಾಡಿಕೊಡುವಂತೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಕೋರಿಕೆ ಸಲ್ಲಿಸಿದ್ದರು. ರಷ್ಯಾ ಅದನ್ನು ಒಪ್ಪಿಕೊಂಡಿದೆ. ಹೀಗಾಗಿ, ಭಾರತೀಯರನ್ನು ಕರೆತರುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಹೇಳಿದರು.
ಉಕ್ರೇನ್‌ನಲ್ಲಿರುವ ಕರ್ನಾಟಕದ ವಿದ್ಯಾರ್ಥಿಗಳು ನಮ್ಮನ್ನನ್ನು ಭಾರತಕ್ಕೆ ಭಾರತಕ್ಕೆ ಕರೆತನ್ನಿ ಎಂದು ನೆರವು ಕೇಳುತ್ತಿದ್ದಾರೆ. ಇಲ್ಲಿರುವ ಅವರ ಪೋಷಕರೂ ಮನವಿ ಮಾಡಿಕೊಳ್ಳುತ್ತಿದ್ದಾರೆ. ಉಕ್ರೇನ್‌ನಲ್ಲಿರುವ ರಾಜ್ಯದ ಎಲ್ಲರ ವಿವರಗಳನ್ನೂ ವಿದೇಶಾಂಗ ಸಚಿವಲಾಯಕ್ಕೆ ನೀಡಲಾಗಿದೆ. ರೊಮೇನಿಯಾ ಮತ್ತು ಇತರ ರಾಷ್ಟ್ರಗಳ ಗಡಿಭಾಗಳಲ್ಲಿ ಭಾರತೀಯರನ್ನು ಬರಮಾಡಿಕೊಂಡು ದೇಶಕ್ಕೆ ಕರೆತರಲಾಗುತ್ತಿದೆ. ಇದಕ್ಕಾಗಿ ಹಲವು ತಂಡಗಳು ಕೆಲಸ ಮಾಡುತ್ತಿವೆ ಎಂದು ಸಿಎಂ ಹೇಳಿದರು.