BengaluruDistricts

ʻಟಿಪ್ಪು ನಿಜ ಕನಸುಗಳುʼ ಪುಸ್ತಕ ಮಾರಾಟಕ್ಕೆ ತಾತ್ಕಾಲಿಕ ತಡೆ

ಬೆಂಗಳೂರು; ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಬರೆದಿರುವ ʻಟಿಪ್ಪು ನಿಜ ಕನಸುಗಳುʼ ಪುಸ್ತಕ ಮಾರಾಟಕ್ಕೆ ಸಿಟಿ ಸಿವಿಲ್‌ ಕೋರ್ಟ್‌ ತಾತ್ಕಾಲಿಕ ತಡೆ ನೀಡಿದೆ. ಟಿಪ್ಪು ನಾಟಕ ಪ್ರದರ್ಶನಕ್ಕೆ‌ ಯಾವುದೇ ಅಡ್ಡಿ ಇಲ್ಲ ಎಂದು ಕೋರ್ಟ್‌ ಇದೇ ವೇಳೆ ತಿಳಿಸಿದೆ.

ಅಡ್ಡಂಡ ಕಾರ್ಯಪ್ಪ ಬರೆದಿರುವ ಟಿಪ್ಪು ಕುರಿತ ಪುಸ್ತಕ ಕೋಮು, ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುವ ಸಾಧ್ಯತೆ ಇದ್ದು, ಪುಸ್ತಕದಲ್ಲಿನ ಅಂಶಗಳು ಸುಳ್ಳುಗಳಿಂದ ಕೂಡಿದೆ. ಹೀಗಾಗಿ ಪುಸ್ತಕ ಮಾರಾಟಕ್ಕೆ ಅವಕಾಶ ನೀಡಬಾರದು ಎಂದು ಬೆಂಗಳೂರು ಜಿಲ್ಲಾ ವಕ್ಫ್‌ ಮಂಡಳಿಯ ಮಾಜಿ ಅಧ್ಯಕ್ಷ ರಫೀಉಲ್ಲಾ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್‌, ಪುಸ್ತಕ ಮಾರಾಟಕ್ಕೆ ತಾತ್ಕಾಲಿಕ ತಡೆ ನೀಡಿದೆ.

ಪುಸ್ತಕ ಪ್ರಕಟಿಸಿರುವ ಅಯೋಧ್ಯಾ ಪ್ರಕಾಶನ ಮತ್ತು ಪುಸ್ತಕ ಮುದ್ರಿಸಿರುವ ರಾಷ್ಟ್ರೋತ್ಥಾನ ಮುದ್ರಣಾಲಯಕ್ಕೆ ಪುಸ್ತಕ ಹಂಚಿಕೆ ಮತ್ತು ಮಾರಾಟ ಮಾಡದಂತೆ ಕೋರ್ಟ್‌ ಆದೇಶ ನೀಡಿದೆ.

Share Post