Bengaluru

ಆರೋಗ್ಯ ಕಾರ್ಯಕರ್ತರು, ಹಿರಿಯ ನಾಗರಿಕರಿಗೆ ಬೂಸ್ಟರ್‌ ಡೋಸ್‌ಗೆ ಚಾಲನೆ

ಬೆಂಗಳೂರು: ಆರೋಗ್ಯ ಕಾರ್ಯಕರ್ತರು ಹಾಗೂ ಅರವತ್ತು ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಇಂದಿನಿಂದ ಬೂಸ್ಟರ್‌ ಡೋಸ್‌ ಲಸಿಕೆ ಅಭಿಯಾನ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌ ಬೂಸ್ಟರ್‌ ಡೋಸ್‌ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.

ಹಿರಿಯ ನಾಗರಿಕರಿಗೆ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಮೂರನೇ ಅಲೆಯಲ್ಲಿ ಹಿರಿಯ ನಾಗರಿಕರಿಗೆ ಕೊರೊನಾ ಸಂಕಷ್ಟ ಎದುರಾಗಬಾರದು ಎಂಬ ಕಾರಣಕ್ಕೆ ಅವರಿಗೆ ಬೂಸ್ಟರ್‌ ಡೋಸ್‌ ನೀಡಲಾಗುತ್ತಿದೆ. ಇನ್ನು ಲಸಿಕಾ ಕಾರ್ಯಕ್ರಮದಲ್ಲಿ ಆರೋಗ್ಯ ಕಾರ್ಯಕರ್ತರು ಭಾಗವಹಿಸುತ್ತಿದ್ದಾರೆ. ಜೊತೆಗೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಕೂಡಾ ಕೊರೊನಾ ಹರಡುವ ಸಾಧ್ಯತೆ ಇದೆ.

ಮುಂಬೈನಲ್ಲಿ ಇನ್ನೂರಕ್ಕೂ ಹೆಚ್ಚು ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಸೋಕಿದೆ. ಹೀಗಾಗಿ ಆರೋಗ್ಯ ಕಾರ್ಯಕರ್ತರಿಗೂ ಬೂಸ್ಟರ್‌ ಡೋಸ್‌ ನೀಡುವ ಮೂಲಕ ಅವರಿಗೆ ಕೊರೊನಾ ಹರಡುವುದನ್ನು ತಡೆಗಟ್ಟುವ ಪ್ರಯತ್ನ ಮಾಡಲಾಗುತ್ತಿದೆ. ದೇಶಾದ್ಯಂತ ಇಂದಿನಿಂದ ಬೂಸ್ಟರ್‌ ಡೋಸ್‌ ಅಭಿಯಾನ ಶುರುವಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಬೂಸ್ಟರ್‌ ಡೋಸ್‌ ನೀಡಲಾಗುತ್ತಿದೆ.

ಇನ್ನು ಆರೋಗ್ಯ ಕಾರ್ಯಕರ್ತರು, ಹಿರಿಯ ನಾಗರಿಕರಿಗೆ ಬೂಸ್ಟರ್‌ ಡೋಸ್‌ ನೀಡಿದ ನಂತರ ಎಲ್ಲಾ ವಯಸ್ಸಿನವರಿಗೂ ಬೂಸ್ಟರ್‌ ಡೋಸ್‌ ಲಸಿಕೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

Share Post