ಬ್ರ್ಯಾಂಡ್ ಬೆಂಗಳೂರು ವಿಚಾರ; 70 ಸಾವಿರ ಮಂದಿಯಿಂದ ಸಲಹೆ, ಸೂಚನೆ
ಬೆಂಗಳೂರು; ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ಬ್ರ್ಯಾಂಡ್ ಬೆಂಗಳೂರು ಮಾಡುವ ಕನಸು ಕಂಡಿದ್ದಾರೆ. ಇದಕ್ಕಾಗಿ ಅವರು ಹಲವು ಸಂಸ್ಥೆಗಳ ಪ್ರತಿನಿಧಿಗಳಿಂದ ಸಲಹೆ ಸೂಚನೆಗಳನ್ನು ಪಡೆದಿದ್ದಾರೆ. ಜೊತೆಗೆ ಇದಕ್ಕೆಂದೇ ಒಂದು ವೆಬ್‌ಸೈಟ್ ಮಾಡಿ ಅದರ ಮೂಲಕ ಸಾರ್ವಜನಿಕರಿಂದಲೂ ಸಲಹೆ, ಸೂಚನೆ ಕೊಡಲು ಮನವಿ ಮಾಡಲಾಗಿತ್ತು. ಸುಮಾರು 70 ಸಾವಿರಕ್ಕೂ ಹೆಚ್ಚು ಮಂದಿ, ಬೆಂಗಳೂರು ನಗರವನ್ನು ಬ್ರ್ಯಾಂಡ್ ಬೆಂಗಳೂರು ಮಾಡಲು ಸಲಹೆ ಸೂಚನೆಗಳನ್ನು ನೀಡಿದ್ದಾರೆ.
ಜನರಿಂದ ಬಂದ ಈ ಪ್ರತಿಕ್ರಿಯೆಗಳನ್ನು ಡಿ.ಕೆ.ಶಿವಕುಮಾರ್ ಅವರ ಅವಲೋಕನ ಮಾಡಿದರು. ಜೊತೆಗೆ ಎಲ್ಲಾ ಅಭಿಪ್ರಾಯಗಳನ್ನೂ ಕ್ರೂಢೀಕರಿಸಿ ವರದಿಯೊಂದನ್ನು ನೀಡುವಂತೆ ಅಧಿಕಾರಿಗಳಿಗೆ ಡಿ.ಕೆ.ಶಿವಕುಮಾರ್ ಸೂಚನೆ ಕೊಟ್ಟಿದ್ದಾರೆ.