BengaluruCrime

ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲ ಪತ್ತೆ; ಸಹನಟನೂ ಬಲೆಗೆ

ಬೆಂಗಳೂರು; ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರು ಅಂತಾರಾಜ್ಯ ಮಾದಕ ವಸ್ತುಗಳ ಮಾರಾಟಗಾರರನ್ನು ಎಚ್‌ಎಸ್‌ಆರ್‌ ಲೇಔಟ್‌ ಪೊಲೀಸರು ಬಂಧಿಸಿದ್ದಾರೆ. ಶಿಯಾಜ್, ಮಹಮ್ಮದ್ ಶಾಹಿದ್, ಮಂಗಲ್ ತೋಡಿ ಜಿತೀನ್ ಬಂಧಿತರು ಆರೋಪಿಗಳು.

ಬಂಧಿತರೆಲ್ಲರೂ ಕೇರಳ ಮೂಲದವರು ಎಂದು ತಿಳಿದುಬಂದಿದೆ.  ಆರೋಪಿಗಳ ಬಳಿಯಿಂದ 13 ಲಕ್ಷ ಮೌಲ್ಯದ 191 ಗ್ರಾಂ ಎಂಡಿಎಂಎ ಹಾಗೂ 2.80ಕೆಜಿ‌ ಗಾಂಜಾ ವಶಡಿಸಿಕೊಳ್ಳಲಾಗಿದೆ. ಬಂಧಿತರ ಪೈಕಿ ಶಿಯಾಜ್ ಮಲಯಾಳಂನ ಕಿರುತೆರೆಯಲ್ಲಿ ಸಹನಟನಾಗಿದ್ದಾನೆ ಎಂದು ಹೇಳಲಾಗಿದೆ. ಮಹಮ್ಮದ್ ಶಾಹಿದ್ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸದ್ಯ ಬಂಧಿತರ ವಿರುದ್ಧ ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

Share Post