Breaking; ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ; ಮೇ 20ಕ್ಕೆ ಪ್ರಮಾಣವಚನ ಫಿಕ್ಸ್
ನವದೆಹಲಿ; ಕೊನೆಗೂ ಡಿ.ಕೆ.ಶಿವಕುಮಾರ್ ಅವರ ಮನವೊಲಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಡರಾತ್ರಿ ನಡೆದ ಸಂಧಾನದಲ್ಲಿ ಒಪ್ಪಿಕೊಂಡಿದ್ದಾರೆ. ಹೈಕಮಾಂಡ್ ಸೂತ್ರಕ್ಕೆ ಡಿ.ಕೆ.ಶಿವಕುಮಾರ್ ಒಪ್ಪಿಕೊಂಡಿದ್ದು, ಸಿದ್ದರಾಮಯ್ಯ ಸಿಎಂ ಹಾಗೂ ಡಿ.ಕೆ.ಶಿವಕುಮಾರ್ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
ಮೇ 20ರಂದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕ್ಯಾಬಿನೆಟ್‌ನಲ್ಲಿ ಡಿ.ಕೆ.ಶಿವಕುಮಾರ್ ಅವರ 30 ಮಂದಿ ಆಪ್ತರಿಗೆ ಅವಕಾಶ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.
ಇನ್ನು ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಮಧ್ಯಾಹ್ನ ಬೆಂಗಳೂರಿಗೆ ವಾಪಸ್ಸಾಗಲಿದ್ದು, ಸಂಜೆ ಏಳು ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಎಲ್ಲಾ ಶಾಸಕರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಇಂದು ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಎಐಸಿಸಿ ನಾಯಕರು ಪ್ರೆಸ್ ಮೀಟ್ ಮಾಡಲಿದ್ದು, ಸಿಎಲ್‌ಪಿ ನಾಯಕರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.
ಇನ್ನು ಆಂತರಿಕವಾಗಿ ಒಪ್ಪಂದ ನಡೆದಿದ್ದು, ಮೊದಲ ಎರಡೂವರೆ ವರ್ಷ ಸಿದ್ದರಾಮಯ್ಯ ಸಿಎಂಆಗಿದ್ದರೆ, ಉಳಿದ ಎರಡೂವರೆ ವರ್ಷಕ್ಕೆ ಡಿ.ಕೆ.ಶಿವಕುಮಾರ್ ಸಿಎಂ ಆಗಲಿದ್ದಾರೆ. ಈ ವಿಚಾರವನ್ನು ಆಂತರಿಕವಾಗಿ ಒಪ್ಪಿಗೆ ಪಡೆಯಲಾಗಿದೆ. ಆದ್ರೆ ಇದನ್ನು ಬಹಿರಂಗ ಮಾಡುವುದಿಲ್ಲ ಎಂದು ತಿಳಿದುಬಂದಿದೆ.