ಲಂಚ ಸ್ವೀಕಾರ ಪ್ರಕರಣ; ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಬೇಕು; ಡಿ.ಕೆ.ಶಿವಕುಮಾರ್ ಆಗ್ರಹ
ಬೆಂಗಳೂರು; ಬಿಜೆಪಿ ಶಾಸಕರ ಮಗನೇ ಸಿಕ್ಕಿಬಿದ್ದಿದ್ದಾನೆ. ಹೀಗಾಗಿ ಇದು ನಲವತ್ತು ಪರ್ಸೆಂಟ್ ಸರ್ಕಾರ ಅನ್ನೋದು ಸಾಬೀತಾಗಿದೆ. ಹೀಗಾಗಿ ಸಿಎಂ ಬೊಮ್ಮಾಯಿಯವರು ತಪ್ಪೊಪ್ಪಿಕೊಂಡು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಗೆ (ಕೆಎಸ್‌ಡಿಎಲ್) ರಾಸಾಯನಿಕ ಪೂರೈಸುವ ಗುತ್ತಿಗೆಯ ಕಾರ್ಯಾದೇಶಕ್ಕಾಗಿ ಲಂಚ ಪಡೆಯಲಾಗಿದ್ದು, ರೆಡ್ ಹ್ಯಾಂಡಾಗಿ ಶಾಸಕ ಮಾಡಾಳ್ ಪುತ್ರ ಸಿಕ್ಕಿಬಿದ್ದಿದ್ದಾನೆ. ಭ್ರಷ್ಟಾಚಾರದ ಬಗ್ಗೆ ಸಾಕ್ಷ್ಯ ಕೊಡಿ ಅಂತ ಸಿಎಂ ಬೊಮ್ಮಾಯಿ ಕೇಳ್ತಾ ಇದ್ರು. ಈ ಪ್ರಕರಣಕ್ಕಿಂತ ಬೇರೆ ಸಾಕ್ಷಿ ಬೇಕೆ ಎಂದು ಡಿಕೆಶಿ ಪ್ರಶ್ನೆ ಮಾಡಿದ್ದಾರೆ.