Bengaluru

ಫೆ.7ರಿಂದ ರಾಜ್ಯ ಬಜೆಟ್‌ ಪೂರ್ವಭಾವಿ ಸಿದ್ಧತೆ: ನಾಳೆ ಸಿಎಂ ದೆಹಲಿಗೆ?

ಬೆಂಗಳೂರು:  ಫೆಬ್ರವರಿ 07 ರಿಂದ ಬಜೆಟ್‌ ಆಯವ್ಯಯದ ಪೂರ್ವಭಾವಿ ಸಿದ್ಧತೆ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್‌.ಟಿ.ನಗರದ ನಿವಾಸದ ಬಳಿ ತಿಳಿಸಿದ್ರು. ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆಗಳನ್ನು ಮುಂದಿನ ವಾರದಿಂದ ನಡೆಸಲಾಗುವುದು. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊರೆಯಲಿರುವ ಸಾಲ ಹಾಗೂ ಅನುದಾನಗಳ ಆಧಾರದ ಮೇಲೆ ರಾಜ್ಯ ಸರ್ಕಾರದ ಆಯವ್ಯಯದ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದರು.

ನಾಳೆ ಸಿಎಂ ದೆಹಲಿ ಪ್ರವಾಸ

ಆಯವ್ಯಯಕ್ಕೂ ಮುನ್ನ ರಾಜ್ಯದ ಎಲ್ಲಾ ಸಂಸದರೊಂದಿಗೆ ಸಭೆ ಮಾಡಬೇಕಿದೆ. ಈ ಸಭೆಗೆ ಸಮಯ ಇನ್ನು ನಿಗದಿಯಾಗಿಲ್ಲ. ಅಂತರರಾಜ್ಯ ಜಲವಿವಾದಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವ ವಕೀಲರನ್ನೂ ಭೇಟಿಯಾಗಲಿದ್ದು, ಬಹುತೇಕವಾಗಿ ನಾಳೆ ದೆಹಲಿಗೆ ಪ್ರಯಾಣ ಬೆಳೆಸುವ ಸಾಧ್ಯತೆಗಳಿವೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ತಿಳಿಸಿದ್ರು.

Share Post