Bengaluru

ನಾಳೆ ಸಿಎಂ ಬೊಮ್ಮಾಯಿ ದೆಹಲಿ ಭೇಟಿ; ಸಂಪುಟ ವಿಸ್ತರಣೆ ಕಸರತ್ತು

ಬೆಂಗಳೂರು; ಮೇ ೧೦ರ ನಂತರ ರಾಜ್ಯ ಸಂಪುಟ ವಿಸ್ತರಣೆಯಾಗುತ್ತದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳುತ್ತಿದ್ದಾರೆ. ನಾಳೆ ಬೆಳಗ್ಗೆ 8 ಗಂಟೆಗೆ ಬೆಂಗಳೂರಿನಿಂದ ಹೊರಡಲಿರುವ ಸಿಎಂ ಬೊಮ್ಮಾಯಿ ಬಿಜೆಪಿ ವರಿಷ್ಠರು ಹಾಗೂ ಕೇಂದ್ರದ ಸಚಿವರನ್ನು ಭೇಟಿಯಾಗಲಿದ್ದಾರೆ.

 

ಇತ್ತೀಚೆಗೆ ಅಮಿತ್‌ ಷಾ ಅವರು ರಾಜ್ಯಕ್ಕೆ ಆಗಮಿಸಿದ್ದರು. ಈ ವೇಳೆ ಸಂಪುಟ ವಿಸ್ತರಣೆ ಕುರಿತಂತೆ ಮಾತುಕತೆ ನಡೆಸಲಾಗಿತ್ತು. ಇದಕ್ಕೆ ಅಮಿತ್‌ ಶಾ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಲಾಗಿತ್ತು. ಈ ನಡುವೆ ಸಿಎಂ ದೆಹಲಿಗೆ ಭೇಟಿ ನೀಡುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.

Share Post