Bengaluru

ಸಚಿವ ಸಂಪುಟ ವಿಸ್ತರಣೆ ವಿಚಾರ; ಸಿಎಂ ಬೊಮ್ಮಾಯಿ ಹೇಳೋದು ಏನು..?

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾಚರಣೆ ವಿಚಾರದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಪ್ರತಿಕ್ರಿಯೆ ನೀಡಿದ್ದಾರೆ. ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ ಅವರು, ಕರ್ನಾಟಕದ ಬಗ್ಗೆ ವಿಶೇಷ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ವರಿಷ್ಠರು ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

 

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ದೆಹಲಿಗೆ ಹೋದ ಬಳಿಕ ವಿಶೇಷ ಸಭೆ ನಡೆಸುತ್ತೇವೆ. ಕರ್ನಾಟಕಕ್ಕೆ ಸಂಬಂಧಿಸಿದಂತೆ ವಿಶೇಷ ಚರ್ಚೆ ಮಾಡಲಿದ್ದೇವೆ. ಅನಂತರ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ ಎಂದು ತಿಳಿಸಿದರು.

 

Share Post