Bengaluru

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಅನುಮೋದನೆ; ಮಾಧುಸ್ವಾಮಿ

ಬೆಂಗಳೂರು; ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಎಸ್​ಸಿ ಮತ್ತು ಎಸ್​ಟಿ ಮೀಸಲಾತಿ ಹೆಚ್ಚಳ ಸಂಬಂಧ ನಾಗಮೋಹನ್ ದಾಸ್ ಶಿಫಾರಸ್‌ ಅನ್ನು ಸಚಿವ ಸಂಪುಟ ಸಭೆಯಲ್ಲಿ ಯಥಾವತ್ ಒಪ್ಪಿಕೊಳ್ಳಲಾಗಿದೆ. ಈ ಬಗ್ಗೆ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ.

   ಎಸ್​ಟಿಗೆ ಶೇಕಡಾ 17 ಹಾಗೂ ಎಸ್​ಸಿಗೆ ಶೇಕಡಾ 7ರಷ್ಟು ಮೀಸಲಾತಿ ಹೆಚ್ಚಿಸಲು ಸಚಿವ ಸಂಪುಟ ಸಮ್ಮತಿ ಸೂಚಿಸಿದೆ. ಈ ಸಂಬಂಧ ಸರ್ಕಾರಿ ಆದೇಶ ಹೊರಡಿಸಲು ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

 ಎರಡು ಮೂರು ದಿನಗಳಲ್ಲಿ ಮೀಸಲಾತಿ ಸಂಬಂಧ ಸರ್ಕಾರಿ ಆದೇಶ ಹೊರಬೀಳಲಿದೆ. ಸರ್ಕಾರಿ ಆದೇಶದಲ್ಲಿ ಯಾವ ರೀತಿ ಮೀಸಲಾತಿ ಕಲ್ಪಿಸಲಾಗುತ್ತೆ ಎಂಬ ಬಗ್ಗೆ ವಿವರವಾಗಿ ಉಲ್ಲೇಖಿಸಲಾಗುತ್ತದೆ ಎಂದು ಸಚಿವರು ಇದೇ ವೇಳೆ ತಿಳಿಸಿದ್ದಾರೆ. ಎಸ್​ಸಿ, ಎಸ್​ಟಿ ಮೀಸಲಾತಿ ಹೆಚ್ಚಳ ನಮ್ಮ ಬದ್ಧತೆಯಾಗಿದೆ. ಬೇರೆ ಸಮುದಾಯದವರಿಗೆ ನೀಡಬೇಕಾದ ಮೀಸಲಾತಿ ಬಗ್ಗೆನೂ ಚರ್ಚೆ ಮಾಡುತ್ತೇವೆ ಎಂದು ಸಚಿವರು, ಎಸ್​ಸಿ, ಎಸ್​ಟಿಯಲ್ಲಿ ಜನಾಂಗದೊಳಗೆ ಒಳ ಮೀಸಲಾತಿ ನೀಡುವ ಬಗ್ಗೆ ಕಾನೂನು ಸಚಿವ ನೇತೃತ್ವದ ಸಮಿತಿ ವರದಿ ನೀಡಿದ ಬಳಿಕ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

Share Post