BengaluruPolitics

SSLC ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಗ್ರೇಸ್‌ ಮಾರ್ಕ್ಸ್‌ ರದ್ದು; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಬೆಂಗಳೂರು; ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಗ್ರೇಸ್‌ ಮಾರ್ಕ್ಸ್‌ ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ಕೊಟ್ಟಿದ್ದಾರೆ.. ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ವರ್ಷದಿಂದ ಯಾವ ಕಾರಣಕ್ಕೂ ಗ್ರೇಸ್‌ ಮಾರ್ಕ್ಸ್‌ ಕೊಡಬಾರದು ಎಂದು ಸೂಚನೆ ನೀಡಿದ್ದಾರೆ..

ವಿದ್ಯಾರ್ಥಿಗಳಿಗೆ ಈ ಬಾರಿ 20 ಗ್ರೇಸ್‌ ಮಾರ್ಕ್ಸ್‌ ನೀಡಲಾಗಿತ್ತು.. ಯಾಕೆ ಗ್ರೇಸ್‌ ಮಾರ್ಕ್ಸ್‌ ಕೊಟ್ಟಿದ್ದೀರಿ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.. ಈ ವೇಳೆ ಅಧಿಕಾರಿಗಳು ಕೊಟ್ಟ ಉತ್ತರದಿಂದ ಸಿಎಂ ಸಿದ್ದರಾಮಯ್ಯ ಆಕ್ರೋಶಗೊಂಡಿದ್ದಾರೆ.. ಗ್ರೇಸ್ ಮಾರ್ಕ್ಸ್ ನೀಡಲು ನಿಮಗೆ ಯಾರು ಹೇಳಿದ್ದು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ..

ಅರ್ಹತೆ ಆಧಾರದ ಮೇಲೆ ವಿದ್ಯಾರ್ಥಿಗಳು ಪ್ರಗತಿ ಸಾಧನೆ ಮಾಡಬೇಕಾಗುತ್ತದೆ.. ಹೀಗೆ ಗ್ರೇಸ್‌ ಮಾರ್ಕ್ಸ್‌ ನೀಡಿದರೆ ವಿದ್ಯಾರ್ಥಿಗಳ ಸ್ಪರ್ಧಾ ಸಾಮರ್ಥ್ಯ ಕಡಿಮೆಯಾಗುತ್ತದೆ ಎಂದು ಸಿಎಂ ಹೇಳಿದರು.. ಇನ್ನು ಸಭೆಯ ನಂತರ ಸಮಜಾಯಿಷಿ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈಗ ಕೊಟ್ಟಿರುವ ಗ್ರೇಸ್ ಮಾರ್ಕ್ಸ್​​​ನಲ್ಲಿ ಯಾವುದೇ ಬದಲಾವಣೆ ಇಲ್ಲ. ಆದ್ರೆ  ಮುಂದಿನ ವರ್ಷದಿಂದ ಎಸ್​ಎಸ್​ಎಲ್​​ಸಿ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದು ಹೇಳಿದ್ದಾರೆ..

ಕೊರನಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್‌ ನೀಡಲಾಗಿತ್ತು.. ಅಧಿಕಾರಿಗಳು ಈಗಲೂ ಅದನ್ನೇ ಮುಂದುವರೆಸಿದ್ದರು.. ಇದರಿಂದಾಗಿ ಸಿಎಂ ಸಿದ್ದರಾಮಯ್ಯ ಆಕ್ರೋಶಗೊಂಡರು ಎಂದು ತಿಳಿದುಬಂದಿದೆ..

 

Share Post