ಕರ್ನಾಟಕದಲ್ಲಿನ ಜೆ.ಪಿ.ನಡ್ಡಾ ವಿರುದ್ಧದ ಕೇಸ್ ರದ್ದು
ಧಾರವಾಡ; ಕಳೆದ ವಿಧಾನಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ ಮತದಾರರಿಗೆ ಎಚ್ಚರಿಕೆ ನೀಡುವ ರೀತಿಯಲ್ಲಿ ಮಾತನಾಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧದ ಎಫ್ಐಆರ್ ರದ್ದಾಗಿದೆ. ಕರ್ನಾಟಕ ಕೈಹೋರ್ಟ್ ಧಾರವಾಡ ಪೀಠ ಈ ತೀರ್ಪು ನೀಡಿ ಆದೇಶ ಹೊರಡಿಸಿದೆ.
ಮೇ ಏಳರಂದು ಜೆಪಿ ನಡ್ಡಾ ಅವರು ವಿಜಯನಗರ ಜಿಲ್ಲೆ ಹರಪನಹಳ್ಳಿಯಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಭಾಷಣ ಮಾಡಿದ್ದರು. ಈ ವೇಳೆ ಅವರು ರಾಜ್ಯದಲ್ಲಿ ಬಿಜೆಪಿ ಸೋತರೆ, ಕೇಂದ್ರ ಸರ್ಕಾರದ ಯೋಜನೆಗಳಿಂದ ರಾಜ್ಯ ಮತದಾರರು ವಂಚಿತರಾಗಬೇಕಾಗುತ್ತದೆ ಎಂದಿದ್ದರು. ಕಿಸಾನ್ ಸಮ್ಮಾನ್ ಯೋಜನೆ ಸೇರಿದ ಕೇಂದ್ರದಿಂದ ರಾಜ್ಯಕ್ಕೆ ಬರುವ ಎಲ್ಲಾ ಯೋಜನೆಗಳನ್ನೂ ನಿಲ್ಲಿಸಲಾಗುವುದು ಎಂಬರ್ಥದಲ್ಲಿ ಮಾತನಾಡಿದ್ದರು.
ಇದರ ವಿರುದ್ಧ ಆಕ್ರೋಶಗಳು ವ್ಯಕ್ತವಾದ ಬೆನ್ನಲ್ಲೇ ಪೊಲೀಸರು ಸ್ವಯಂ ಪ್ರೇರಿತರಾಗಿ ಎಫ್ಐಆರ್ ದಾಖಲು ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಎಫ್ಐಆರ್ ರದ್ದು ಕೋಡಿ ನಡ್ಡಾ ಕೋರ್ಟ್ ಮೊರೆಹೋಗಿದ್ದರು. ವಿಚಾರಣೆ ನಡೆಸಿದ ಏಕಸದಸ್ಯ ಪೀಠ, ಎಫ್ಐಆರ್ ರದ್ದು ಮಾಡಿ ಆದೇಶ ಹೊರಡಿಸಿದೆ.