BengaluruPolitics

ಕಾವೇರಿ ವಿವಾದ; ವಿಧಾನಸೌಧ ಗಾಂಧಿ ಪ್ರತಿಮೆ ಬಳಿ ಬಿಜೆಪಿ-ಜೆಡಿಎಸ್‌ ಜಂಟಿ ಪ್ರತಿಭಟನೆ

ಬೆಂಗಳೂರು; ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡ ಮೇಲೆ ಬಿಜೆಪಿ-ಜೆಡಿಎಸ್‌ ಏನು ಮಾಡಿದರೂ ಒಟ್ಟಿಗೆ ಮಾಡುತ್ತಿವೆ. ಕಾವೇರಿ ಹೋರಾಟದಲ್ಲಿ ಒಟ್ಟಿಗೆ ಪಾಲ್ಗೊಳ್ಳುತ್ತಿವೆ. ಇಂದು ವಿಧಾನಸೌಧದ ಗಾಂಧಿ ಪ್ರತಿಮೆಗಳು ಜೆಡಿಎಸ್‌ ಹಾಗೂ ಬಿಜೆಪಿ ನಾಯಕರು ಜಂಟಿಯಾಗಿ ಪ್ರತಿಭಟನಾ ಧರಣಿ ನಡೆಸಿದರು. ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ತಮಿಳುನಾಡು ಸಿಎಂ ಕಾಂಗ್ರೆಸ್‌ ನಾಯಕರಿಗೆ ಆಪ್ತರಿದ್ದಾರೆ. ಅವರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದರು.

ಮೈತ್ರಿ ಬಳಿಕ ಮೊದಲ ಬಾರಿಗೆ ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯದ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದಾರೆ. ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಕುಮಾರಸ್ವಾಮಿ ಪಾಲ್ಗೊಂಡಿದ್ದರಯ. ಈ ವೇಳೆ ಮಾಜಿ ಸಿಎಂ ಸದಾನಂದಗೌಡ, ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಜೊತೆಗೂ ಕುಮಾರಸ್ವಾಮಿ ಮಾತನಾಡಿದರು.

ಪ್ರತಿಭಟನೆಯಲ್ಲಿ ಜೆಡಿಎಸ್‌, ಬಿಜೆಪಿ ಶಾಸಕರು, ಸಂಸದರು ಪಾಲ್ಗೊಂಡಿದ್ದರು. ಇದಕ್ಕೂ ಮೊದಲು ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿಯವರು, ನಾವು ಎಲ್ಲಾ ಸಮುದಾಯಗಳ ಪರವಾಗಿ ಹೋರಾಟ ಮಾಡುತ್ತೇವೆ. ಅಲ್ಪಸಖ್ಯಾತರಿಗೆ ಅನ್ಯಾಯ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

Share Post