Bengaluru

ಕಾವೇರಿ ವಿವಾದ; ಪ್ರತಿಭಟನೆ ವೈಲೆಂಟ್‌ ಆದ್ರೆ ಕಾನೂನು ಕ್ರಮ – ಜಿ.ಪರಮೇಶ್ವರ್‌

ಬೆಂಗಳೂರು; ತಮಿಳುನಾಡಿಗೆ ನೀರು ಬಿಡಬೇಕೆಂದು ಸುಪ್ರೀಂಕೋರ್ಟ್‌ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಪ್ರತಿಭಟನೆಗಳು ಶಾಂತಿಯುತವಾಗಿರಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.
ಪ್ರತಿಭಟನೆ ಮಾಡಲು ಅವಕಾಶವಿದೆ. ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು. ಹೋರಾಟ ಹಿಂಸಾಚಾರ ಅಥವಾ ಉಗ್ರ ಹೋರಾಟವಾದರೆ ಕಾನೂನು ರೀತ್ಯ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡಬೇಕಾಗುತ್ತದೆ ಎಂದು ಪರಮೇಶ್ವರ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು ಯಾರೂ ಅಹಿಕರ ಘಟನೆಗಳಿಗೆ ಅವಕಾಶ ನೀಡಬಾರದು ಎಂದಿದ್ದಾರೆ.

Share Post