BengaluruNational

ಕಾವೇರಿ ವಿವಾದ; ತಮಿಳುನಾಡಿಗೆ ನೀರು ಬಿಡಲೇಬೇಕು – ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ

ನವದೆಹಲಿ; ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕೂಡಾ ರಾಜ್ಯದ ವಾದವನ್ನು ಕೇಳಿಲ್ಲ. ತಮಿಳುನಾಡಿಗೆ ಹದಿನೈದು ದಿನಗಳ ಕಾಲ ದಿನಕ್ಕೆ 3 ಸಾವಿರ ಕ್ಯೂಸೆಕ್‌ ನೀರು ಹರಿಸಬೇಕೆಂದು ಆದೇಶ ನೀಡಿದೆ. ಇಂದು ದೆಹಲಿಯಲ್ಲಿ ಸಭೆ ನಡೆಸಲಾಯಿತು. ಈ ವೇಳೆ ರಾಜ್ಯದ ಅಧಿಕಾರಿಗಳು ರಾಜ್ಯದ ಪರಿಸ್ಥಿತಿ ಬಗ್ಗೆ ಸಾಕಷ್ಟು ಮಾಹಿತಿ ನೀಡಿದರು. ಆದರೂ ಕೂಡಾ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಾಜ್ಯ ವಾದಕ್ಕೆ ಮನ್ನಣೆ ಕೊಟ್ಟಿಲ್ಲ. ಬದಲಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶವನ್ನು ಪಾಲಿಸುವಂತೆ ಸೂಚನೆ ಕೊಟ್ಟಿದೆ.

ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿತ್ತು. ಇದರ ನಡುವೆಯೇ ದೆಹಲಿಯಲ್ಲಿ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಕರ್ನಾಟಕದ ಪರವಾದ ಆದೇಶ ಬರಬಹುದು ಎಂದು ಭಾವಿಸಲಾಗಿತ್ತು. ಆದ್ರೆ, ಈ ಸಭೆಯಲ್ಲೂ ತಮಿಳುನಾಡಿಗೆ ನೀರು ಬಿಡಲೇಬೇಕೆಂದು ಸೂಚಿಸಲಾಗಿದೆ. ಹೀಗಾಗಿ ಇಂದು ಸಂಜೆ ಸಿಎಂ ಸಭೆ ಕರೆದಿದ್ದಾರೆ. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸೋ ಸಾಧ್ಯತೆ ಇದೆ.

ಕರ್ನಾಟಕದ ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಶೇ 53 ರಷ್ಟು ಮಳೆ ಕೊರತೆ ಇದೆ. ರಾಜ್ಯ ಸರ್ಕಾರವು 161 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿದೆ. 34 ತಾಲೂಕುಗಳು ಮಧ್ಯಮ ಬರ ಪೀಡಿತವೆಂದು ಸರ್ಕಾರ ಘೋಷಿಸಿದೆ. 32 ತೀವ್ರ ಬರ ಪೀಡಿತ ತಾಲೂಕುಗಳು ಕಾವೇರಿ ಜಲಾನಯನ ಪ್ರದೇಶದಲ್ಲಿವೆ ಎಂದು ರಾಜ್ಯ ವಾದ ಮಾಡಿತ್ತು.

ಆದ್ರೆ ಜೂನ್​ನಿಂದ ಸೆಪ್ಟೆಂಬರ್​ವರೆಗೆ ಕರ್ನಾಟಕ 123 ಟಿಎಂಸಿ ನೀರು ಬಿಡಬೇಕಿತ್ತು, ಆದ್ರೆ ಕರ್ನಾಟಕ ಬಿಟ್ಟಿರೋದು ಕೇವಲ 40 ಟಿಎಂಸಿ ನೀರು ಎಂದು ತಮಿಳುನಾಡು ಹೇಳಿತ್ತು.

 

Share Post