Bengaluru

ನಾಳೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ; ಮತ್ತೇನು ತೀರ್ಮಾನ ಬರುತ್ತೋ ಏನೋ..!

ನವದೆಹಲಿ; ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್‌ 29ರಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ದಿನಕ್ಕೆ 3 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಲಾಗಿತ್ತು. ಅಕ್ಟೋಬರ್‌ 15ರವರೆಗೆ ನೀರು ಹರಿಸಲು ಸೂಚಿಸಲಾಗಿತ್ತು. ಈ ಅವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಮತ್ತೊಂದು ಸಭೆ ಕರೆಯಲಾಗಿದೆ. ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಪ್ರತಿನಿಧಿಗಳು ವರ್ಚುಯಲ್‌ ಮೂಲಕ ನಾಳೆ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 

ನಾಳಿನ ಸಭೆಯಲ್ಲಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಎಷ್ಟಿದೆ..? ಒಳಹರಿವು ಎಷ್ಟಿದೆ ಎಂಬುದರ ಮಾಹಿತಿ ಸಂಗ್ರಹಿಸಲಾಗುತ್ತದೆ. ಒಳಹರಿವಿನ ಪ್ರಮಾಣವನ್ನು ನೋಡಿಕೊಂಡು ಹೊಸ ಆದEಶ ಬರುವ ಸಾಧ್ಯತೆ ಇದೆ.  ತಮಿಳುನಾಡು ಸರ್ಕಾರದ ಪರವಾಗಿ ಕಾವೇರಿ ತಾಂತ್ರಿಕ ಸಮಿತಿ ಅಧ್ಯಕ್ಷ, ಮುಖ್ಯ ಎಂಜಿನಿಯರ್ ಸುಬ್ರಮಣ್ಯಂ ಮತ್ತು ಪಟ್ಟಾಭಿ ರಾಮನ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ತಮಿಳುನಾಡು ಸರ್ಕಾರ ನಾಳಿನ ಸಭೆಯಲ್ಲಿ ದಿನಕ್ಕೆ 13,000 ಕ್ಯೂಸೆಕ್ ನಂತೆ 15 ದಿನಗಳ ಕಾಲ ನೀರು ಬಿಡುವಂತೆ ಆದೇಶಿಸಲು ಮನವಿ ಮಾಡಲಿದೆ. ಆದ್ರೆ ಕರ್ನಾಟಕ ತನ್ನ ವಾದ ಮಂಡಿಸಲಿದ್ದು, ಕರ್ನಾಟಕದ ವಸ್ತುಸ್ಥಿತಿಯನ್ನು ವಿವರಿಸಲಿದೆ. ಇನ್ನೊಂದೆಡೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶವನ್ನು ಪಾಲಿಸಲು ಸೂಚಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಿ ತಮಿಳುನಾಡು ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ಪಾಸ್ ಮಾಡಿದೆ.

Share Post