Bengaluru

ಕಾವೇರಿ ನೀರು ಹಂಚಿಕೆ ವಿವಾದ; ಇಂದು ಕಾನೂನು ತಜ್ಞರ ಜೊತೆ ಡಿಕೆಶಿ ಚರ್ಚೆ

ನವದೆಹಲಿ; ಕರ್ನಾಟಕದಲ್ಲಿ ಹಲವು ದಿನಗಳಿಂದ ಮಳೆಯಾಗಿಲ್ಲ. ಇದರಿಂದಾಗಿ ಡ್ಯಾಂಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದೆ. ಕೆಆರ್‌ಎಸ್‌ ಜಲಾಶಯದಲ್ಲೂ ನೀರು ಸಂಗ್ರಹ ಕಡಿಮೆಯಾಗಿದ್ದು, ಕುಡಿಯುವ ನೀರಿಗೂ ಸಮಸ್ಯೆಯಾಗುವ ಅಪಾಯವಿದೆ. ಈ ನಡುವೆ ಕಾವೇರಿ ನೀರು ನಿರ್ವಹಣಾ ಸಮಿತಿ ತಮಿಳುನಾಡಿಗೆ ಹದಿನೈದು ದಿನಗಳ ಕಾಲ ಪ್ರತಿ ದಿನ ಐದು ಸಾವಿರ ಕ್ಯೂಸೆಕ್‌ ನೀರು ಬಿಡುವಂತೆ ಆದೇಶ ಮಾಡಿದೆ. ಆದ್ರೆ, ನೀರು ಬಿಡುಗಡೆ ಮಾಡಿದರೆ ರಾಜ್ಯದಲ್ಲಿ ನೀರಿನ ಸಮಸ್ಯೆಯಾಗುತ್ತದೆ. ಜೊತೆಗೆ ಕಾವೇರಿ ನದಿ ಪಾತ್ರದ ರೈತರಿಗೆ ಕೂಡಾ ಅನ್ಯಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಹೋರಾಟಕ್ಕೆ ರಾಜ್ಯ ಸಜ್ಜಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ದೆಹಲಿಗೆ ತೆರಳಿದ್ದಾರೆ. ಇಂದು ದೆಹಲಿಯಲ್ಲಿ ಅವರು ಕಾನೂನು ತಂಡದ ಜೊತೆ ಸಭೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಭವನ-1 ರಲ್ಲಿ ಸಭೆ ನಿಗದಿಯಾಗಿದೆ. ರಾಜ್ಯದ ಪರ ವಾದ ಮಾಡುತ್ತಿರುವ ವಕೀಲ ಶ್ಯಾಮ್ ದಿವಾನ್ ಅವರನ್ನು ಕೂಡಾ ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ.

ತದನಂತರ ಕರ್ನಾಟಕ ಭವನ-1 ರಲ್ಲಿ ಅಧಿಕಾರಿಗಳೊಂದಿಗೆ ಮತ್ತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Share Post