ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ; 87.33ರಷ್ಟು ಫಲಿತಾಂಶ
ನವದೆಹಲಿ; ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ 87.33ರಷ್ಟು ಫಲಿತಾಂಶ ಬಂದಿದ್ದು, ತಿರುವನಂತಪುರ ಮೊದಲ ಸ್ಥಾನ ಪಡೆದುಕೊಂಡಿದೆ.
ಫೆಬ್ರವರಿ 15ರಿಂದ 12ನೇ ತರಗತಿ ಪರೀಕ್ಷೆ ನಡೆಸಲಾಗಿತ್ತು. ಸುಮಾರು 16 ಲಕ್ಷ 96 ಸಾವಿರದ 770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ ಶೇಕಡಾ 87.33ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಇನ್ನು ತಿರುವನಂತಪುರದ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇಲ್ಲಿ 99.91ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದು, ಬಹುತೇಕರು ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಪ್ರಯಾಗ್ ರಾಜ್ ಕೊನೆಯ ಸ್ಥಾನ ಪಡೆದುಕೊಂಡಿದೆ. ಪ್ರಯಾಗ್ ರಾಜ್‌ನಲ್ಲಿ ಶೇ. 78.05ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
cbseresults.nic.in ಹಾಗೂ cbse.gov.in. ಈ ವೆಬ್‌ಸೈಟ್‌ಗಳಿಂದ ನೀವು ಫಲಿತಾಂಶವನ್ನು ಪಡೆದುಕೊಳ್ಳಬಹುದು.