BengaluruCrime

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ರೇಡ್‌

ಬೆಂಗಳೂರು: ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂದು ಮಾಹಿತಿ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ನಡೆಸಿದ್ದಾರೆ. ಇಂದು ಮುಂಜಾನೆಯೇ ಜೈಲಿಗೆ ಭೇಟಿ ನೀಡಿರುವ ಅಧಿಕಾರಿಗಳು ಜೈಲಿನ ಮೂಲೆ ಮೂಲೆ ಜಾಲಾಡಿದ್ದಾರೆ.


ಜೈಲಿನ ಪ್ರತಿಯೊಂದು ಬ್ಯಾರಕ್‌ ಹಾಗೂ ಕೊಠಡಿಗಳಲ್ಲಿ ಪರಿಶೀಲನೆ ನಡೆಸಿರುವ ಸಿಸಿಬಿ ಅಧಿಕಾರಿಗಳು, ಗಾಂಜಾ ಹಾಗೂ ಗಾಂಜಾ ಸೇದುವ ಚಿಲುಮೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಂದಹಾಗೆ ವಿಚಾಣಾಧೀನ ಹಾಗೂ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳು, ಮೊಬೈಲ್‌ ಬಳಸುತ್ತಿದ್ದಾರೆ, ಡ್ರಗ್ಸ್‌ ಸೇವಿಸುತ್ತಿದ್ದಾರೆ ಹಾಗೂ ಹಲವು ಅಕ್ರಮ ಚಟುವಟಿಕೆ ನಡೆಸುತ್ತಿದ್ದಾರೆಂಬ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಈ ಹಿಂದೆಯೂ ಕೂಡಾ ಹಲವು ಬಾರಿ ದಾಳಿ ಪರಪ್ಪನ ಅಗ್ರಹಾರದ ಜೈಲಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.

Share Post