Bengaluru

ಕೇಂದ್ರ ಬಜೆಟ್‌ ಮೇಲೆ ಯಾವುದೇ ನಿರೀಕ್ಷೆ ಇಲ್ಲ; ಮಾಜಿ ಸಿಎಂ ಹೆಚ್ಡಿಕೆ

ಬೆಂಗಳೂರು:  ಕೇಂದ್ರ ಬಜೆಟ್‌ ಮೇಲೆ ನಾವು ಯಾವುದೇ ನಿರೀಕ್ಷೆಗಳನ್ನು ಇಟ್ಟುಕೊಂಡಿಲ್ಲ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಬಿಡದಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಬಜೆಟ್‌ ಬಗ್ಗೆ ಯಾವುದೇ ನಿರೀಕ್ಷೆ ಇಟ್ಟುಕೊಳ್ಳುವುದಕ್ಕೆ ಸಾಧ್ಯವಿಲ್ಲ. ಕೇಂದ್ರ ಬಜೆಟ್‌ನಲ್ಲಿ ಅಂತಹ ವಿಶೇಷವಾದ್ದದ್ದೇನೂ ಇರುವುದಿಲ್ಲ ಎಂದು ಹೇಳಿದ್ದಾರೆ.

ನಾಳೆ ನಿರ್ಮಲಾ ಸೀತಾರಾಮನ್‌ ಅವರು ಕೇಂದ್ರ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಜನರು ಹಲವು ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ. ಈ ನಡುವೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿಯವರು, ನಮಗೆ ಯಾವುದೇ ನಿರೀಕ್ಷೆ ಇಲ್ಲ ಎಂದು ಹೇಳಿದ್ದಾರೆ.

 

Share Post