BengaluruPolitics

ಕೇಂದ್ರ ಸರ್ಕಾರದ ವಿರುದ್ಧ ನಾಳೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ಕೇಂದ್ರ ಸರ್ಕಾರ ಬಡವರಿಗೆ ವಿತರಣೆ ಮಾಡಲು ಅಕ್ಕಿ ನೀಡದೆ ಅವರಿಗೆ ತೊಂದರೆ ನೀಡಲು ಮುಂದಾಗಿದೆ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು, ಅಕ್ಕಿ ನೀಡಲು ನಿಯಮ, ಪದ್ಧತಿ ಇದೆ ಎಂದು ಹೇಳಿದರು.

ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರ ನಿರಾಕರಿಸುತ್ತಿದೆ. ಕೇಂದ್ರ ಸರ್ಕಾರ ಬಡವರ ವಿರೋಧಿ ಸರ್ಕಾರ. ಇದರ ವಿರುದ್ಧ ನಾವು ನಾಳೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಬೆಂಗಳೂರು ನಗರದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ನಾನೂ ಪಾಲ್ಗೊಳ್ಳುತ್ತೇನೆ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಇನ್ನು ಸಂಸದ ಡಿ.ಕೆ.ಸುರೇಶ್​ಗೆ ಯಾವುದೇ ವೈರಾಗ್ಯ ಇಲ್ಲ ಎಂದು ಹೇಳುವ ಮೂಲಕ ಮಾಜಿ ಸಚಿವ ಆರ್. ಅಶೋಕ್ ಹೇಳಿಕೆಗೆ ಟಾಂಗ್ ನೀಡಿದರು.

Share Post