ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ; ಮರು ತನಿಖೆಗೆ ಮುಂದಾದ ಸರ್ಕಾರ
ಬೆಂಗಳೂರು; ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ 35ಕ್ಕೂ ಹೆಚ್ಚು ಕೊವಿಡ್ ರೋಗಿಗಳು ಮೃತಪಟ್ಟಿದ್ದರು. ಈ ಪ್ರಕರಣವನ್ನು ಮರು ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಹಿಂದಿನ ಬಿಜೆಪಿ ಸರ್ಕಾರ ಪ್ರಕರಣದ ತನಿಖೆಗೆ ಕೆಲವರನ್ನು ನೇಮಕ ಮಾಡಿತ್ತು. ಆದ್ರೆ ಇದುವರೆಗೂ ತನಿಖೆ ಮುಗಿದಿಲ್ಲ. ವರದಿಯೂ ಸಲ್ಲಿಕೆಯಾಗಿಲ್ಲ. ಹೀಗಾಗಿ, ಮರು ತನಿಖೆ ನಡೆಸಲು ಸರ್ಕಾರ ಚಿಂತನೆ ನಡೆಸಿದೆ.
ಈ ಬಗ್ಗೆ ಸರ್ಕಾರಕ್ಕೆ ತಿಳಿಸಿದ್ದೇನೆ. ಅದಕ್ಕೆ ಡಿಪಿಆರ್ ಕೂಡ ಸಿದ್ಧವಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.