Bengaluru

ಚಾಮರಾಜಪೇಟೆ ಮೈದಾನ ಕಂದಾಯ ಇಲಾಖೆಗೆ ಸೇರಿದ್ದು; ಸಚಿವ ಆರ್‌.ಅಶೋಕ್‌

ಬೆಂಗಳೂರು; ಚಾಮರಾಜಪೇಟೆಯಲ್ಲಿ ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ್ದಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಮೈದಾನದಲ್ಲಿ ಯಾವುದೇ ಕಾರ್ಯಕ್ರಮ ನಡೆಸಬೇಕಿದ್ದರೂ ಇಲಾಖೆಯ ಅನುಮತಿ ಪಡೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಚಾಮರಾಜಪೇಟೆಯಲ್ಲಿ ಮೈದಾನದ ಬಗ್ಗೆ ವಿವಾದ ಇದೆ. ಹೀಗಾಗಿ ಅಲ್ಲಿ ಧ್ವಜಾರೋಹಣ, ಗಣೇಶೋತ್ಸವ, ನಮಾಜ್‌, ಪ್ರಾರ್ಥನೆ ಏನೇ ಮಾಡಬೇಕೆಂದರೂ ಅನುಮತಿ ಪಡೆಯಬೇಕು. ಅದಕ್ಕಾಗಿ ಕಂದಾಯ ಇಲಾಖೆಗೆ ಮನವಿ ಸಲ್ಲಿಸಬೇಕು ಎಂದು ಸಚಿವ ಅಶೋಕ್‌ ಹೇಳಿದ್ದಾರೆ. ಇಲಾಖೆ ಏನು ತೀರ್ಮಾನ ಕೈಗೊಳ್ಳುತ್ತದೋ ಅದರಂತೆ ನಡೆಯಬೇಕು. ಈವರೆಗೆ ಯಾರೂ ಮನವಿ ಸಲ್ಲಿಸಿಲ್ಲ. ಈ ಹಿಂದೆ ಬಿಬಿಎಂಪಿಯಿಂದ ಅನುಮತಿ ಪಡೆದುಕೊಳ್ಳುತ್ತಿದ್ದರು ಎಂದು ಇದೇ ವೇಳೆ ಆರ್‌.ಅಶೋಕ್‌ ಹೇಳಿದ್ದಾರೆ.

ಈ ಜಾಗ ತಮ್ಮದೆಂದು ಹೇಳುವವರು ದಾಖಲೆಗಳನ್ನು ಸಲ್ಲಿಸಬೇಕು ಎಂದು ಬಿಬಿಎಂಪಿ ತಿಳಿಸಿತ್ತು. ಆದರೆ, ಸೂಕ್ತ ದಾಖಲೆಗಳನ್ನು ಯಾರೂ ಸಲ್ಲಿಸಿಲ್ಲ. ಆದರೆ ಕಂದಾಯ ಇಲಾಖೆಗೆ ಸೇರಿದ್ದು ಎನ್ನುವುದಕ್ಕೆ ನಮ್ಮ ಬಳಿ ದಾಖಲೆಗಳಿವೆ. ಈವರೆಗೂ ಇದು ಬಿಬಿಎಂಪಿಗೆ ಸೇರಿದ್ದು ಎಂದು ಭಾವಿಸಲಾಗಿತ್ತು. ನ್ಯಾಯಾಲಯದ ಸೂಚನೆಯಂತೆ ದಾಖಲೆಗಳ ಪರಿಶೀಲನೆ ನಡೆಸಿದ ನಂತರ ಕಂದಾಯ ಇಲಾಖೆಗೆ ಸೇರಿದ್ದು ಎಂಬುದು ಖಚಿತವಾಗಿದೆ ಎಂದು ಅಶೋಕ್‌ ಇದೇ ವೇಳೆ ತಿಳಿಸಿದ್ದಾರೆ.

Share Post