Bengaluru

ಇಂದಿನಿಂದ ಮತ್ತೆ ಮಳೆ ಸಾಧ್ಯತೆ; ಐದು ದಿನ ಆರ್ಭಟಿಸಲಿದ್ದಾನೆ ವರುಣ!

ಬೆಂಗಳೂರು; ಮುಂಗಾರಿನಲ್ಲಿ ರಾಜ್ಯದಲ್ಲಿ ಸರಿಯಾಗಿ ಮಳೆಯಾಗಲಿಲ್ಲ. ಆದ್ರೆ ಹಿಂಗಾರಿನಲ್ಲಿ ಮಳೆ ಚೆನ್ನಾಗಿ ಆಗುತ್ತಿದೆ. ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಉತ್ತಮ ಮಳೆಯಾಗಿತ್ತು. ಇದೀಗ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದಿನಿಂದ ಐದು ದಿನಗಳ ಕಾಲ ರಾಜ್ಯಾದ್ಯಂತ ಜೋರು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇದಲ್ಲದೆ ಬೆಂಗಳೂರು ಸೇರಿ ರಾಜ್ಯ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ.

Share Post