BengaluruScienceTechTechnology

ಚಂದ್ರಯಾನ-3 ಯಶಸ್ವಿ ಹಿನ್ನೆಲೆ; ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ಸಿಎಂ

ಬೆಂಗಳೂರು; ಚಂದ್ರಯಾನ-೩ ಯಶಸ್ವಿಯಾದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಕೊಂಡಾಡಿದರು. ದೇಶಕ್ಕೆ ಕೀರ್ತಿ ತಂದಿದ್ದಕ್ಕೆ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದರು. 

ಇಸ್ರೋ ವಿಜ್ಞಾನಿಗಳು ಸಿಹಿ ತಿನ್ನಿಸಿದ ಸಿಎಂ ಸಿದ್ದರಾಮಯ್ಯ, ಮೈಸೂರು ಪೇಟಾ ತೊಡಿಸಿ, ಶಾಲು, ಹಾರ ಹಾಕಿ ಸನ್ಮಾನ ಮಾಡಿದರು. ಇಸ್ರೋ ಅಧ್ಯಕ್ಷ ಸೋಮನಾಥ, ವಿಜ್ಞಾನಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಉಪಸ್ಥಿತರಿದ್ದರು.

Share Post