ಕಾಂಗ್ರೆಸ್ ಸೇರಿದ ಚನ್ನಪಟ್ಟಣ, ರಾಮನಗರ ಜೆಡಿಎಸ್ ಮುಖಂಡರು
ಬೆಂಗಳೂರು; ಚನ್ನಪಟ್ಟಣದ ಮಾಜಿ ಶಾಸಕ ಎಂ.ಸಿ.ಅಶ್ವತ್ಥ್ ಸೇರಿದಂತೆ ಚನ್ನಪಟ್ಟಣ ಹಾಗೂ ರಾಮನಗರದ ಅನೇಕ ಜೆಡಿಎಸ್ ಮುಖಂಡರು ಇಂದು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಜೊತೆ ಮೈತ್ರಿಕೊಂಡಿದ್ದರಿಂದ ಅಸಮಾಧಾನಗೊಂಡು ಇಂದು ಹಲವಾರು ಮುಖಂಡರು ಕಾಂಗ್ರೆಸ್ ಸೇರಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಜಬಿಉಲ್ಲಾ ಖಾನ್, ಎಂ.ಸಿ.ಕರಿಯಪ್ಪ, ಮುಕ್ರಂ, ಬೋಜೇಗೌಡ ಮುಂತಾದವರು ಕಾಂಗ್ರೆಸ್ ಸೇರ್ಪಡೆಯಾದರು. ಇದೇ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪದೇ ಪದೇ ಪಕ್ಷ ವಿಸರ್ಜನೆ ಮಾಡುತ್ತೇನೆ ಎಂದು ಹೇಳುತ್ತೀರಿ. ಜೊತೆಗೆ ತಾವು ಎಲ್ಲಿ ಬೇಕಾದರೂ ಸಂಬಂಧ ಬೆಳೆಸಿಕೊಳ್ಳಬಹುದು. ಹೀಗಿರುವಾಗ ಸಿದ್ಧಾಂತ ನಂಬಿಕೊಂಡ ಕಾರ್ಯಕರ್ತರು ಎಲ್ಲಿ ಹೋಗಬೇಕು ಎಂದು ಪ್ರಶ್ನೆ ಮಾಡಿದ್ದಾರೆ.
ನಮ್ಮಲ್ಲಿ ಎಂಎಲ್‌ಸಿ ಆಗಿದ್ದ ಸಿ.ಎಂ.ಇಬ್ರಾಹಿಂ ಅವರನ್ನು ರಾಜೀನಾಮೆ ಕೊಡಿಸಿ ಕರ್ಕೊಂಡು ಹೋದಿರಿ. ಈಗ ಏನಾಗಿದೆ ಎಂದು ಪ್ರಶ್ನೆ ಮಾಡಿದ ಡಿಕೆಶಿ, ಸಾಗರಪಾದಿಯಲ್ಲಿ ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರುತ್ತಾರೆ ಎಂದು ಹೇಳಿದ್ದಾರೆ.