Bengaluru

ಕೋಲಾರ-ಚಿಕ್ಕಬಳ್ಳಾಪುರದಲ್ಲಿ ಗೆಲುವಿನತ್ತ ಕಾಂಗ್ರೆಸ್‌ ಅಭ್ಯರ್ಥಿ

ಕೋಲಾರ: ನಾಯಕರ ಪ್ರತಿಷ್ಠೆ ಕಣವಾಗಿದ್ದ ಕೋಲಾರ-ಚಿಕ್ಕಬಳ್ಳಾಪುರ ವಿಧಾನಪರಿಷತ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವಿನ ನಗೆ ಬೀರುವ ಸಾಧ್ಯತೆ ಎದ್ದು ಕಾಣುತ್ತಿದೆ. ಎರಡನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಅನಿಲ್‌ ಕುಮಾರ್‌ 1102 ಮತಗಳನ್ನು ಪಡೆದಿದ್ದು, 217 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ 885 ಮತಗಳು ಪಡೆದಿದ್ದರೆ, ಜೆಡಿಎಸ್‌ ಅಭ್ಯರ್ಥಿ 748 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.

Share Post