Bengaluru

ಕರ್ನಾಟಕದಲ್ಲಿ ಮೇಘಸ್ಪೋಟ ಸಂಭವ; ಹವಾಮಾನ ಇಲಾಖೆಯಿಂದ ಅಲರ್ಟ್‌ ಘೋಷಣೆ

ಬೆಂಗಳೂರು; ಮುಂದಿನ ಮೂರು ದಿನಗಳಲ್ಲಿ ರಾಜ್ಯ ಸೇರಿ ದೇಶದ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಇರಬೇಕು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿ ಹಳೇ ಮೈಸೂರು ಭಾಗದಲ್ಲಿ ಮೇಘಸ್ಫೋಟ ಸಂಭವಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಹಲವು ಭಾಗಗಳಲ್ಲಿ ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಜೂನ್ 18ರಂದು ಬೆಂಗಳೂರು ನಗರದಲ್ಲಿ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಜೂನ್‌ 18 ಹಾಗೂ 19 ಎರಡೂ ದಿನ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಕೋಲಾರ, ಚಿಕ್ಕಬಳ್ಳಾಪುರದಲ್ಲೂ ಜೂನ್‌ 19ರಂದು ಭಾರೀ ಮಳೆಯಾಗಲಿದ್ದು, ಎಲ್ಲಾ ಕಡೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Share Post