Bengaluru

ಪ್ರತಿಭಟನಾ ಸ್ಥಳಕ್ಕೆ ತೆರಳಿ ದಲಿತರ ಬೇಡಿಕೆಗಳನ್ನು ಆಲಿಸಿದ ಸಿಎಂ ಬಸವರಾಜ್‌ ಬೊಮ್ಮಾಯಿ

ಬೆಂಗಳೂರು: ಸ್ವಾತಂತ್ರ್ಯ ಉದ್ಯಾನವನದಲ್ಲಿ ದಲಿತ ಸಂಘರ್ಷ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಭಟನಾ ನಿರತರ ಬೇಡಿಕೆಗಳನ್ನು ಆಲಿಸಿದ್ರು. ದಲಿತರ ಬೇಡಿಕೆಗಳನ್ನು ಆಲಿಸಲು ಖುದ್ದಾಗಿ ಪ್ರತಿಭಟನಾ ಸ್ಥಳಕ್ಕೆ ತೆರಳಿದ್ರು.  ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ತೆರಳಿ ಅವರ ಮನವಿ ಸ್ವೀಕಾರ ಮಾಡಿದ್ರು.

ಸಿಎಂ ಬೊಮ್ಮಾಯಿ ಕಾಮನ್ ಮ್ಯಾನ್ ರೀತಿಯಲ್ಲಿ ದಲಿತರ ಪ್ರತಿಭಟನಾ ಸ್ಥಳಕ್ಕೆ ತೆರಳಿ ಮನವಿ ಪತ್ರ ಸ್ವೀಕರಿಸಿದರು. ನಂತರ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಬೇಡಿಕೆ ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುವುದಾಗಿ ಹೇಳಿದರು. ಸಿಎಂ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ್ದರಿಂದ ಪ್ರತಿಭಟನಾ ನಿರತರು ಧನ್ಯವಾದ ಅರ್ಪಿಸಿದರು.

Share Post