Bengaluru

ಮಣಿಪಾಲ್‌ ಆಸ್ಪತ್ರೆಗೆ ದಾಖಲಾದ ಸಿಎಂ ಬೊಮ್ಮಾಯಿ

ಬೆಂಗಳೂರು: ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಯವರು ಮಣಿಪಾಲ್‌ ಆಸ್ಪತ್ರೆಗೆ  ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಹಳೆ ಮದ್ರಾಸ್‌ ರಸ್ತೆಯಲ್ಲಿರುವ ಮಣಿಪಾಲ್‌ ಆಸ್ಪತ್ರೆಯಲ್ಲಿ ಮತ್ತೊಮ್ಮೆ ಕೋವಿಡ್‌ ಪರೀಕ್ಷೆಗೆ ಒಳಗಾಗಿ ಚಿಕಿತ್ಸೆ ಪಡೆಯಲಿದ್ದಾರೆ. ನಿನ್ನೆ ಸಂಜೆ ಕೋವಿಡ್‌ ದೃಢಪಟ್ಟಿರುವುದಾಗಿ ಟ್ವೀಟ್‌ ಮಾಡಿದ್ದ ಬೊಮ್ಮಾಯಿಯವರು, ತಮ್ಮ ಸಂಪರ್ಕಕ್ಕೆ ಬಂದ ಎಲ್ಲರೂ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚನೆ ಕೂಡ ನೀಡಿದ್ರು. ಇದೀಗ ಮುಂಜಾಗ್ರತಾ ಕ್ರಮವಾಗಿ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ಇನ್ನೂ ಸಿಎಂ ಅವರಿಗೆ ಕೊರೊನಾ ಎಂದು ಗೊತ್ತಾದ ಕೂಡಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಕರೆ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ. ಎಚ್ಚರಿಕೆಯಿಂದ ಇದ್ದು ಸೂಕ್ತ ಚಿಕಿತ್ಸಾ ಕ್ರಮಗಳನ್ನು ಅನುಸರಿಸುವಂತೆ ಸಲಹೆ ನೀಡಿದ್ರು. ಸಿದ್ದರಾಮಯ್ಯ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಕ್ಕೆ ಸಿಎಂ ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ.

ಸಿಎಂ ಮಗ ಭರತ್‌ ಬೊಮ್ಮಾಯಿಯವರಿಗೂ ಕೋವಿಡ್‌ ಪಾಸಿಟಿವ್‌ ಬಂದಿದ್ದು. ಮನೆಯಲ್ಲಿ ಪ್ರತ್ಯೇಕವಾಗಿ ಐಸೋಲೇಷನ್‌ ಆಗಿರುವುದಾಗಿ ಟ್ವೀಟ್‌  ಮಾಡಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಕೊರೊನಾ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.

Share Post