ಬಿಎಸ್‌ವೈ ಭೇಟಿಯಾದ ಸಿಎಂ ಹಾಗೂ ಸಚಿವರು; ರಾಜಕೀಯ ವಲಯದಲ್ಲಿ ಕುತೂಹಲ
ಬೆಂಗಳೂರು; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರ ಸಂಪುಟದ ಕೆಲ ಸಚಿವರು ದಿಢೀರ್ ಅಂತ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕಾವೇರಿ ನಿವಾಸದಲ್ಲಿ ಬಿಎಸ್‌ವೈ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಅವರ ಸಂಪುಟದ ಕೆಲ ಸದಸ್ಯರು ಹದಿನYದಕ್ಕೂ ಹೆಚ್ಚು ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.
ಸಂಪುಟ ಸಭೆ ಬಳಿಕ ಸಿಎಂ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ. ಕಂದಾಯ ಸಚಿವ ಆರ್.ಅಶೋಕ್ ಅವರು ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ದಿಢೀರ್ ಅಂತ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದು, ರಾಜ್ಯ ರಾಜಕೀಯವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.