Bengaluru

ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ವಿಚಾರ; ತನಿಖೆ ಸಮಿತಿ ರಚಿಸುತ್ತೇವೆಂದ ಸಿಎಂ

ಬೆಂಗಳೂರು: ಪಿಎಸ್ಐ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಅಕ್ರಮದ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ, ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂಧು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ನಡೆದ ಜನತಾ ದರ್ಶನದ ಮೇಲೆ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು. ಪಿಎಸ್ಐಗೆ ಆಯ್ಕೆಯಾದ ಅಭ್ಯರ್ಥಿಗಳು ನೀಡಿದ ಮನವಿಯನ್ನು ಸ್ವೀಕರಿಸಿದರು.

ಪಿಎಸ್ಐಗೆ ಆಯ್ಕೆಯಾದರೂ ಇನ್ನೂ ನೇಮಕಾತಿ ಆದೇಶ ಸಿಕ್ಕಿಲ್ಲ ಎಂದು ಸಿಎಂ ಮುಂದೆ ಅಭ್ಯರ್ಥಿಗಳು ಅಹವಾಲು ತೋಡಿಕೊಂಡರು.  545 ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ನಡೆದಿದ್ದು, 3 ತಿಂಗಳು ಕಳೆದರೂ ಆಯ್ಕೆಯಾದವರು ನೇಮಕವಾಗಿಲ್ಲ. ಹಾಗಾಗಿ, ಕೂಡಲೇ ನೇಮಕಾತಿ ಪ್ರಕ್ರಿಯೆ ನಡೆಸುವಂತೆ ಅಭ್ಯರ್ಥಿಗಳು ಮನವಿ ಮಾಡಿದರು.

ಮನವಿ ಸ್ವೀಕರಿಸಿದ ನಂತರ ಮಾತನಾಡಿದ ಸಿಎಂ ಬೊಮ್ಮಾಯಿ, ಈಗಾಗಲೇ 545 ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮ ಸಂಬಂಧ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಆಯ್ಕೆಯಾಗಿರುವ ಅಭ್ಯರ್ಥಿಗಳು ಬಂದು ಮನವಿ ಕೊಟ್ಟಿದ್ದಾರೆ. ಈ ಬಗ್ಗೆ ಒಂದು ಕಮಿಟಿ ರಚಿಸಿ, ವರದಿ ಬಂದ ನಂತರ ಪರಾಮರ್ಶಿಸಿ ಮುಂದಿನ ನಿರ್ಧಾರ ಕೈಗೊಳ್ಳಲು ನಿರ್ಧರಿಸಿದ್ದೇನೆ ಎಂದರು. ಆ ಮೂಲಕ ಪಿಎಸ್ಐ ನೇಮಕಾತಿ ವಿಳಂಬವಾಗಲಿದೆ ಎನ್ನುವ ಸುಳಿವು ನೀಡಿದರು.

Share Post