ಅಮರನಾಥದಲ್ಲಿ 100ಕ್ಕೂ ಹೆಚ್ಚು ಕನ್ನಡಿಗರು; ರಕ್ಷಣೆಗೆ ಕ್ರಮ ಎಂದ ಸಿಎಂ
ಬೆಂಗಳೂರು; ಅಮರನಾಥದಲ್ಲಿ ಮೇಘ ಸ್ಪೋಟವಾಗಿದೆ. ಸದ್ಯದ ಮಾಹಿತಿ ಪ್ರಕಾರ ನೂರಕ್ಕೂ ಹೆಚ್ಚು ಜನ ಕನ್ನಡಿಗರು ಅಮರನಾಥ ಯಾತ್ರೆಯಲ್ಲಿದ್ದಾರೆ. ಕನ್ನಡಿಗರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಿಂದ ಅಮರನಾಥ ಯಾತ್ರೆ ಕೈಗೊಂಡಿದ್ದ ಕನ್ನಡಿಗರೆಲ್ಲರೂ ಸುರಕ್ಷಿತವಾಗಿದ್ದಾರೆ. ಯಾವುದೇ ಅಹಿತಕರ ಸುದ್ದಿ ಬಂದಿಲ್ಲ. ಜಮ್ಮು ಕಾಶ್ಮೀರ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಜೊತೆ ನಾವು ನಿರಂತರ ಸಂಪರ್ಕದಲ್ಲಿದ್ದೇವೆ. ರಕ್ಷಣಾ ಕಾರ್ಯಕ್ಕಾಗಿ ಸಹಾಯವಾಣಿಯನ್ನೂ ತೆರೆಯಲಾಗಿದೆ. ಈಗಾಗಲೇ 15-20 ಜನ ಕರೆ ಮಾಡಿ ತಾವು ಸಿಲುಕಿರುವ ಸ್ಥಳದ ಬಗ್ಗೆ ಮಾಹಿತಿ ನೀಡಿದ್ದಾರೆ. ರಕ್ಷಣಾ ಕಾರ್ಯವನ್ನು ಕೂಡಲೇ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.