Bengaluru

ವರಿಷ್ಠರ ಭೇಟಿ ವೇಳೆ ಸಂಪುಟದ ಬಗ್ಗೆ ಚರ್ಚೆ ಸಾಧ್ಯತೆ; ಸಿಎಂ ಬೊಮ್ಮಾಯಿ

ಬೆಂಗಳೂರು: ಸಂಪುಟ ವಿಸ್ತರಣೆ ಬಗ್ಗೆ ನನಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಹೈಕಮಾಂಡ್‌ ನಾಯಕರ ಭೇಟಿ ವೇಳೆ ಈ ಬಗ್ಗೆ ಚರ್ಚೆ ನಡೆಯಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದೆಹಲಿಗೆ ಹೋಗುವುದಕ್ಕೂ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್‌ನಿಂದ ಯಾವುದೇ ಸೂಚನೆ ನನಗೆ ಬಂದಿಲ್ಲ. ಆದ್ರೆ, ಹೈಕಮಾಂಡ್‌ ಭೇಟಿ ವೇಳೆ ಈ ವಿಚಾರ ಚರ್ಚೆಗೆ ಬರಬಹುದು ಎಂದು ಅವರು ಹೇಳಿದ್ದಾರೆ.

ಎರಡು ದಿನಗಳ ದೆಹಲಿಗೆ ಭೇಟಿಗೆ ಹೊರಡುತ್ತಿದ್ದೇನೆ. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹಸಚಿವ ಅಮಿತ್‌ ಷಾ ಅವರನ್ನು ಭೇಟಿಯಾಗಲಿದ್ದೇನೆ. ಈ ವೇಳೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಸಿಎಂ ಹೇಳಿದ್ದಾರೆ. ಇಂತಹ ಸಂದರ್ಭದಲ್ಲಿ ನಮ್ಮ ಕೆಲ ಶಾಸಕರು ದೆಹಲಿಗೆ ಹೋಗುವುದು ಸಾಮಾನ್ಯ ಎಂದೂ ಅವರು ಹೇಳಿದ್ದಾರೆ.

 

Share Post