Bengaluru

ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಲು ಕಾಂಗ್ರೆಸ್‌ಗೆ ನೈತಿಕ ಹಕ್ಕಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಸಂಬಂಧ ಕಾಂಗ್ರೆಸ್‌ಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಸಿಎಂ, ದೇಶದಲ್ಲಿ ಅತಿಹೆಚ್ವು ಬೆಲೆ ಏರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಎಲ್ಲಾ ಕಾಂಗ್ರೆಸ್‌ನದ್ದು ಎಂದು ಲೇವಡಿ ಮಾಡಿದರು.

ಮುಸ್ಕಾನ್ ಅವರಿಗೆ ಅಲ್ ಖೈದಾ ಮುಖ್ಯಸ್ಥರು ನೀಡಿರುವ ಬೆಂಬಲಕ್ಕೆ ಸಂಬಂಧಿಸಿದಂತೆ ಅನಂತ ಕುಮಾರ್ ಹೆಗಡೆ ಅವರು ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಯಾಗಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಏನಿದೆ ಎಂದು ಗೊತ್ತಿಲ್ಲ. ಅನಂತಕುಮಾರ್ ಹೆಗಡೆ ಅವರ ಬಳಿ ಚರ್ಚೆ ಮಾಡಿ ಅವರ ಬಳಿ ಇರುವ ಮಾಹಿತಿ ಬಗ್ಗೆ ತಿಳಿದುಕೊಳ್ಳಲಾಗುವುದು. ಅದರ ಆಧಾರದ ಮೇಲೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದರು.

ಸಂಸದೆ ಸುಮಲತಾ ಅಂಬರೀಶ್ ಅವರು ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದರು. ಹೀಗಾಗಿ ಸುಮಲತಾ ಅವರು ಬಿಜೆಪಿ ಸೇರುತ್ತಿದ್ದಾರೆಯೇ ಎಂದು ಕೇಳಿದ್ದಕ್ಕೆ, ಅವರ ಸಹೋದರಿಯ ಮಗಳ ಮದುವೆಗೆ ಆಹ್ವಾನಿಸಲು ಬಂದಿದ್ದರು. ಕೆಲವು ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲಾಯಿತು ಎಂದರು.

Share Post