BengaluruPolitics

ಸೆಪ್ಟೆಂಬರ್‌, ಅಕ್ಟೋಬರ್‌ನಲ್ಲಿ ಆರು ಕಡೆ ದೊಡ್ಡ ರ್‍ಯಾಲಿ; ಸಿಎಂ

ಬೆಂಗಳೂರು: ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ರಾಜ್ಯದಲ್ಲಿ ಆರು ಕಡೆ ದೊಡ್ಡ ರ್‍ಯಾಲಿಗಳನ್ನು ನಡೆಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಡಿರುವ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ  ಪಕ್ಷದ ಸಂಘಟನೆ, ಪ್ರವಾಸ, ಜನಸಂಪರ್ಕದ ಬಗ್ಗೆ ಬಿಎಸ್‌ವೈ ಚರ್ಚೆ ಮಾಡಲಾಗಿದೆ ಎಂದು ಹೇಳಿದರು.

ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಂತರ ಸಿಎಂ ಮಾತನಾಡಿದರು. ಯಡಿಯೂರಪ್ಪ ಅವರು ಪಕ್ಷದ ಸಂಘಟನೆಯ ಬಗ್ಗೆ ಮಾತನಾಡಲು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಬಂದಿದ್ದಾರೆ. ಅಲ್ಲಿಯ ಮಾತುಕತೆ, ಸೂಚನೆಯ ಬಗ್ಗೆ ವಿವರವಾಗಿ ಚರ್ಚೆ ಮಾಡಿದ್ದೇವೆ. ನಮ್ಮ ಪ್ರಧಾನಮಂತ್ರಿಗಳು ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅವರು ಭೇಟಿ ನೀಡುವ ಸಂದರ್ಭದಲ್ಲಿ ಪಕ್ಷದ ವತಿಯಿಂದ ಮಾಡಬೇಕಿರುವ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ಮಾಡಿದ್ದೇವೆ ಎಂದಿದ್ದಾರೆ.

Share Post