ಅಭಿವೃದ್ಧಿಗೆ ಪ್ರಾಮುಖ್ಯತೆ ಕೊಡಲು ಜಿಲ್ಲಾ ಪ್ರವಾಸ; ಬಸವರಾಜ ಬೊಮ್ಮಾಯಿ
ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ಜಿಲ್ಲಾ ಪ್ರವಾಸಕ್ಕೆ ತೆರಳಲಿದ್ದು, ರಾಜ್ಯದ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಆಹ್ವಾನ ಬಂದಲ್ಲಿ ದೆಹಲಿಗೆ ಹೋಗುತ್ತೇನೆ ಎಂದರು.
ಹುಬ್ಬಳ್ಳಿ ಘಟನೆಯ ಬಗ್ಗೆ ತೀವ್ರವಾದ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರು ಯಾರೇ ಆಗಲಿ. ಅವರನ್ನು ಬಿಡುವುದಿಲ್ಲ. ಅವರಿಗೆ ಸೂಕ್ತ ಶಿಕ್ಷೆಯಾಗುತ್ತದೆ. ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡುವುದು ಅಕ್ಷಮ್ಯ ಅಪರಾಧ. ಅವರ ವಿರುದ್ಧ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದರು.