Bengaluru

ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಗೆ ಕೊರೊನಾ ದೃಢ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಯವರಿಗೆ ಕೊರೊನಾ ಸೋಂಕು ತಗುಲಿದೆ. ಸದ್ಯ ಹೋಂ ಕ್ವಾರಂಟೈನ್‌ನಲ್ಲಿರುವ ಅವರು ಸೋಂಕು ತಗುಲಿರುವುದಾಗಿ ಟ್ವೀಟ್‌ ಮಾಡಿ ತಿಳಿಸಿದ್ದಾರೆ.

ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಸಿಎಂ ಬಸವರಾಜ್‌ ಬೊಮ್ಮಾಯಿಯವರು ಕೊರೊನಾ ಸೋಂಕಿನಿಂದ ಶೀಘ್ರ ಗುಣಮುಖರಾಗಲಿ ಎಂದು ಬಿಜೆಪಿ ನಾಯಕರು ಹಾಗೂ ರಾಜ್ಯದ ಜನತೆ ಹರಸಿದ್ದಾರೆ. ಸೂಕ್ತ ಚಿಕಿತ್ಸೆ ಪಡೆದು ಆಋಒಗ್ಯವಾಗಿರಿ ಎಂದು ಹಲವರು ಸಿಎಂ ಅವರ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ.

Share Post