BengaluruPolitics

ಕಾಂಗ್ರೆಸ್‌ ನನ್ನ ರಾಜೀನಾಮೆ ಕೇಳ್ತಿರೋದು ಹಾಸ್ಯಾಸ್ಪದ; ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು; ಮತದಾರರ ಮಾಹಿತಿ ಸಂಗ್ರಹ ವಿಚಾರ ಸಂಬಂಧ ಕಾಂಗ್ರೆಸ್‌ ಆರೋಪ ಮಾಡಿರುವುದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್‌ ನವರು ವಿಚಾರದಲ್ಲಿ ದಿವಾಳಿಯಾಗಿದ್ದಾರೆ. ಅವರು ನನ್ನ ರಾಜೀನಾಮೆ ಕೇಳುತ್ತಿರುವುದು ಹಾಸ್ಯಾಸ್ಪದ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮತದಾರರಲ್ಲಿ ಜಾಗೃತಿ ಮೂಡಿಸುವುದಕ್ಕೆ ಎನ್‌ಜಿಒಗಳಿಗೆ ಅನುಮತಿ ನೀಡಲಾಗುತ್ತದೆ. ಅದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಕಾಂಗ್ರೆಸ್‌ ಆಡಳಿತದ ಕಾಲದಲ್ಲೂ ಹೀಗೆ ನೀಡಲಾಗಿತ್ತು. ಆದ್ರೆ ಅವರು ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಎನ್‌ಜಿಒ ಬಗ್ಗೆ ತನಿಖೆ ನಡೆಸುತ್ತೇವೆ. ಕಾನೂನು ಮೀರಿ ಅವರು ನಡೆದುಕೊಂಡಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನವರು ಸಣ್ಣ ಪುಟ್ಟ ವಿಚಾರಗಳನ್ನು ದೊಡ್ಡದಾಗಿ ಬಿಂಬಿಸಲು ಹೊರಟಿದ್ದಾರೆ. ಇದನ್ನು ನೋಡಿದರೆ ಕಾಂಗ್ರೆಸ್‌ ನಾಯಕರು ವಿಚಾರದಲ್ಲಿ ದಿವಾಳಿಯಾಗಿದ್ದಾರೆ ಅನ್ನೋದು ಅರ್ಥವಾಗುತ್ತದೆ ಎಂದು ಹೇಳಿದ್ದಾರೆ.

Share Post