BengaluruPolitics

ಸಿಎಂ ಬದಲಾವಣೆ ಕಾಂಗ್ರೆಸ್‌ ಕಾಣುತ್ತಿರುವ ಕನಸು; ಸಚಿವ ಡಾ.ಕೆ.ಸುಧಾಕರ್‌

ಬೆಂಗಳೂರು; ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತೆ ಎಂದು ಹೇಳುತ್ತಿರುವ ಕಾಂಗ್ರೆಸ್‌ ನಾಯಕರ ವಿರುದ್ಧ ಸಚಿವ ಡಾ.ಕೆ.ಸುಧಾಕರ್‌ ಸಿಡಿದೆದ್ದಿದ್ದಾರೆ. ಈ ಬಗ್ಗೆ ಅವರು ಸರಣಿ ಟ್ವೀಟ್‌ ಮಾಡಿದ್ದಾರೆ. ಆ ಟ್ವೀಟ್‌ಗಳಲ್ಲೇನಿದೆ ನೋಡಿ..

ಟ್ವೀಟ್‌-೧

ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಎಂಬುದು ಕಾಂಗ್ರೆಸ್ ಕಾಣುತ್ತಿರುವ ಕನಸು. ಬೊಮ್ಮಾಯಿ ಅವರ ದಕ್ಷ ನಾಯಕತ್ವದಲ್ಲಿ ಬಿಜೆಪಿ ಸರಕಾರ ಸುಭದ್ರವಾಗಿದೆ. ಆದರೆ ಕಾಂಗ್ರೆಸ್ ನ ಡಬಲ್ ಡೋರ್ ಬಸ್ಸಿನಿಂದ ಯಾರು, ಯಾರನ್ನು ಕೆಳಗಿಳಿಸುತ್ತಾರೆ ಎಂಬುದು ಸದ್ಯದಲ್ಲೇ ಗೊತ್ತಾಗುತ್ತದೆ.

ಟ್ವೀಟ್‌-೨

ಮುಖ್ಯಮಂತ್ರಿ ಸ್ಥಾನದ ಘನತೆ- ಗೌರವಗಳನ್ನು ಹಾಳುಗೆಡವಿದ್ದೇ ಕಾಂಗ್ರೆಸ್. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮನೆಯ ಗೇಟ್ ಕೀಪರ್ ಗಳ ರೀತಿ ಕಾಂಗ್ರೆಸ್ ಮುಖ್ಯಮಂತ್ರಿಗಳು ವರ್ತಿಸಿದ್ದು ಇತಿಹಾಸ. ಆದರೆ ಮುಖ್ಯಮಂತ್ರಿ ಗಾದಿಯ ಕನಸು ಕಾಣುತ್ತಿರುವ ರಾಜ್ಯದ ಇಬ್ಬರು ಹಿರಿಯ ನಾಯಕರು ಈಗಲೇ ಗಾಂದಿ ಕುಟುಂಬದ ಗೇಟ್ ಕಾಯುತ್ತಿರುವುದು ವರ್ತಮಾನ.

ಟ್ವೀಟ್‌-೩

ಗಾಜಿನ ಮನೆಯಲ್ಲಿ ನಿಂತು ಅನ್ಯರತ್ತ ಕಲ್ಲು ತೂರುತ್ತಿರುವ ಕಾಂಗ್ರೆಸಿಗರ ಮನಃಸ್ಥಿತಿಯ ಬಗ್ಗೆ ಅಯ್ಯೋ ಎನ್ನಿಸುತ್ತಿದೆ. ದಿಲ್ಲಿ ಮಾಲೀಕರು ಕಳುಹಿಸಿದ ಚೀಟಿ ಆಧಾರದ ಮೇಲೆ ಮುಖ್ಯಮಂತ್ರಿಗಳನ್ನು ಬದಲಾಯಿಸಿದ ಘನ ಉದಾಹರಣೆ ನಿಮ್ಮ ಪಕ್ಷಕ್ಕೆ ಮಾತ್ರ ಇದೆ.

Share Post