BengaluruPolitics

ಜೆಡಿಎಸ್‌ ಅಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಉಚ್ಚಾಟನೆ; ಹೆಚ್ಡಿಕೆ ನೂತನ ಅಧ್ಯಕ್ಷ

ಬೆಂಗಳೂರು; ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂರನ್ನು ಉಚ್ಛಾಟನೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿಯವರನ್ನು ಆಯ್ಕೆ ಮಾಡಲಾಗಿದೆ. ಇಂದು ಬೆಂಗಳೂರಿನ ಜೆಡಿಎಸ್‌ ಕಚೇರಿಯಲ್ಲಿ ನಡೆದ ಜೆಡಿಎಸ್‌ ಕೋರ್‌ ಕಮಿಟಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇತ್ತೀಚೆಗೆ ಸಿ.ಎಂ.ಇಬ್ರಾಹಿಂ ಅವರು ಸಭೆಯೊಂದನ್ನು ಕರೆದಿದ್ದರು. ಆ ಸಭೆಯ ನಂತರ ನಾನೇ ಜೆಡಿಎಸ್‌ ಅಧ್ಯಕ್ಷ. ನನ್ನದೇ ನಿಜವಾದ ಜೆಡಿಎಸ್‌ ಎಂದು ಹೇಳಿದ್ದರು. ಜೊತೆಗೆ ನಾವು ಬಿಜೆಪಿ ಜೊತೆ ಹೋಗೋದಿಲ್ಲ. ನಾವು ಕಾಂಗ್ರೆಸ್‌ನ್ನು ಬೆಂಬಲಿಸುತ್ತೇವೆ ಎಂದು ಹೇಳಿದ್ದರು. ಜೊತೆಗೆ ಅದೇ ಸಭೆಯಲ್ಲಿ ಕುಮಾರಸ್ವಾಮಿ ಹಾಗೂ ನಿಖಿಲ್‌ ಕುಮಾರಸ್ವಾಮಿಯವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವ ಬಗ್ಗೆಯೂ ಚರ್ಚೆ ನಡೆದಿತ್ತು. ಆದ್ರೆ, ಅದಕ್ಕಿಂತ ಮುಂಚೆ ಸಿ.ಎಂ.ಇಬ್ರಾಹಿಂ ಅವರನ್ನೇ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಎನ್‌ಡಿಎ ಜೊತೆ ಚುನಾವಣಾ ಮೈತ್ರಿ ಮಾಡಿಕೊಂಡಿದ್ದಕ್ಕೆ ಸಿ.ಎಂ.ಇಬ್ರಾಹಿಂ ಸೇರಿ ಹಲವು ನಾಯಕರು ಅಸಮಾಧಾನಗೊಂಡಿದ್ದರು. ಮೈತ್ರಿ ಮಾಡಿಕೊಳ್ಳುವಾಗ ಪಕ್ಷದ ರಾಜ್ಯಾಧ್ಯಕ್ಷನಾಗಿರುವ ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು ಎಂದು ಸಿಎಂ ಇಬ್ರಾಹಿಂ ಹೇಳಿದ್ದರು. ಆದ್ರೆ ಇಂದಿನ ಜೆಡಿಎಸ್‌ ಕೋರ್‌ ಕಮಿಟಿ ಸಭೆಯಲ್ಲಿ ಸಿ.ಎಂ.ಇಬ್ರಾಹಿಂ ನಡೆ ಪಕ್ಷಕ್ಕೆ ವಿರುದ್ಧವಾದುದು. ಹೀಗಾಗಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕೆಂದು ಒಕ್ಕರಲಿನ ನಿರ್ಧಾರ ಕೈಗೊಳ್ಳಲಾಯಿತು.

ಸಭೆಯ ನಂತರ ಮಾತನಾಡಿದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು, ಕೋರ್‌ ಕಮಿಟಿ ಸದಸ್ಯರ ಒತ್ತಾಯದ ಮೇರೆಗೆ ಇಬ್ರಾಹಿಂರನ್ನು ಉಚ್ಛಾಟನೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

 

Share Post