ಅಡ್ಡ ಮತದಾನ ಹಿನ್ನೆಲೆ; ಶ್ರೀನಿವಾಸದ್ವಯರ ಅನರ್ಹತೆಗೆ ಮನವಿ
ಬೆಂಗಳೂರು; ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲಿ ಜೆಡಿಎಸ್ ಗುಬ್ಬಿ ಶ್ರೀನಿವಾಸ್ ಮತ್ತು ಶ್ರೀನಿವಾಸ್ ಗೌಡರ ಶಾಸಕ ಸ್ಥಾನವನ್ನು ಅನರ್ಹಗೊಳಿಸಬೇಕೆಂದು ಸ್ಪೀಕರ್‌ಗೆ ಮನವಿ ಮಾಡಲಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಳೆ ಸ್ಪೀಕರ್‌ಗೆ ಈ ಬಗ್ಗೆ ಮನವಿ ಸಲ್ಲಿಸಲಾಗುತ್ತದೆ. ಸ್ಪೀಕರ್ ಕ್ರಮ ಕೈಗೊಳ್ಳದಿದ್ದರೆ, ನಮ್ಮ ನಾಯಕರ ಜೊತೆ ಚರ್ಚೆ ಮುಂದಿನ ಕಾನೂನು ಹೋರಾಟ ನಡೆಸಲಾಗುತ್ತದೆ ಎಂದು ಅವರು ತಿಳಿಸಿದರು. ಇನ್ನು ಇಬ್ಬರು ಶಾಸಕರನ್ನೂ ಉಚ್ಚಾಟನೆ ಮಾಡಲು ಜೆಡಿಎಸ್‍ನಿಂದ ತೀರ್ಮಾನ ಮಾಡಲಾಗಿದೆ. ಈ ಸಂಬಂಧ ನಾಳೆಯೇ ಆದೇಶ ಹೊರಡಿಸುವುದಾಗಿ ಅವರು ಸ್ಪಷ್ಟನೆ ನೀಡಿದರು.
ಬೆಂಗಳೂರಿನಲ್ಲಿ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಇಬ್ಬರನ್ನು ಅಮಾನತು ಮಾಡಲಾಗಿದೆ. ಕುಮಾರಸ್ವಾಮಿ ಅವರು ಬೆಂಗಳೂರಿನ ಹೊರಗೆ ಇದ್ದಾರೆ. ನಾಳೆ ಅವರ ಬಳಿ ಸಹಿ ಪಡೆದ ಬಳಿಕ ನಾಳೆ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದರು.