Bengaluru

ಸಿ.ಎಂ.ಇಬ್ರಾಹಿಂ ನಾಳೆ ಜೆಡಿಎಸ್‌ ಸೇರ್ಪಡೆ; ನಾಳೆಯೇ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ

ಬೆಂಗಳೂರು: ಕಾಂಗ್ರೆಸ್‌ ತೊರೆದಿರುವ ಮಾಜಿ ವಿಧಾನಪರಿಷತ್‌ ಸದಸ್ಯ ಸಿ.ಎಂ.ಇಬ್ರಾಹಿಂ ಅವರು ನಾಳೆ ಅಧಿಕೃತವಾಗಿ ಜೆಡಿಎಸ್‌ ಪಕ್ಷ ಸೇರ್ಪಡೆಯಾಗಲಿದ್ದಾರೆ. ನಾಳೆ ಬೆಳಗ್ಗೆ ಹತ್ತು ಗಂಟೆಗೆ ಜೆಡಿಎಸ್‌ ಕೇಂದ್ರ ಕಚೇರಿಯಲ್ಲಿ ನಡೆಯುವ ಸಮಾರಂಭದಲ್ಲಿ ಅವರು ಪಕ್ಷ ಸೇರ್ಪಡೆಯಾಗಲಿದ್ದಾರೆ. ಜೊತೆಗೆ ನಾಳೆಯೇ ಅವರು ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹಾಲಿ ರಾಜ್ಯಾಧ್ಯಕ್ಷರಾಗಿರುವ ಹೆಚ್‌.ಕೆ.ಕುಮಾರಸ್ವಾಮಿಯವರು ಪಕ್ಷದ ಸಂಸದೀಯ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಈ ವೇಳೆ ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹಾಗೂ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share Post